ಶಿವಮೊಗ್ಗ: ಪಶ್ಚಿಮ ಬಂಗಾಳದ ಎಸ್.ಆರ್. ಎಸ್ ಮೆಡಿಕಲ್ ಕಾಲೇಜಿನಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ರೋಗಿಗಳ ಕುಟುಂಬಸ್ಥರು ನಡೆಸಿದ ಹಲ್ಲೆಯನ್ನು ಖಂಡಿಸಿ ವೈದ್ಯಕೀಯ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕರ್ತವ್ಯ ನಿರತ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ವೈದ್ಯಾಧಿಕಾರಿಳಿಂದ ಪ್ರತಿಭಟನೆ - kannada news
ಪಶ್ಚಿಮ ಬಂಗಾಳದ ಎಸ್.ಆರ್.ಎಸ್. ಮೆಡಿಕಲ್ ಕಾಲೇಜಿನಲ್ಲಿ ಕರ್ತವ್ಯನಿರತ ಕಿರಿಯ ವೈದ್ಯರಾದ ಡಾ. ಪರಿಭಾ ಮುಖರ್ಜಿ ಅವರ ಮೇಲೆ ರೋಗಿಗಳ ಕಡೆಯವರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದರಿಂದ ಡಾ. ಮುಖರ್ಜಿರವರು ಜೀವನ್ಮರಣದ ಮಧ್ಯೆ ಹೋರಾಟ ನಡೆಸುವಂತಾಗಿದೆ. ಈ ಹಲ್ಲೆಯನ್ನು ಖಂಡಿಸಿ ಶಿವಮೊಗ್ಗದಲ್ಲೂ ವೈದ್ಯರು ಪ್ರತಿಭಟನೆ ನಡೆಸಿದರು.
ಪಶ್ಚಿಮ ಬಂಗಾಳದ ಎಸ್.ಆರ್.ಎಸ್ಮೆ ಡಿಕಲ್ ಕಾಲೇಜಿನಲ್ಲಿ ಕರ್ತವ್ಯನಿರತ ಕಿರಿಯ ವೈದ್ಯರಾದ ಡಾ. ಪರಿಭಾ ಮುಖರ್ಜಿ ಮೇಲೆ ರೋಗಿಗಳ ಕಡೆಯವರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದರಿಂದ ಡಾ. ಮುಖರ್ಜಿರವರು ಜೀವನ್ಮರಣದ ಮಧ್ಯೆ ಹೋರಾಟ ನಡೆಸುವಂತಾಗಿದೆ. ಹೀಗಾಗಿ ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು ಹಿಂಜರಿಯವಂತಾಗಿದೆ. ಹಲ್ಲೆ ನಡೆಸಿದ ಆರೋಪಿಗಳಿಗೆ ಕಾನೂನು ರೀತಿ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಜಿಲ್ಲೆಯ ಎಲ್ಲಾ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿ ಪ್ರತಿಭಟನೆ ನಡೆಸಿದರು.
ನಗರದ ಐಎಂಎ ಹಾಲ್ನಿಂದ ಡಿಸಿ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ನಂತರ ಡಿಸಿ ಕಚೇರಿಯ ಮುಂದೆ ಹಲ್ಲೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ಹಾಗೂ ಕಿರಿಯ ವೈದ್ಯರು, ಆಸ್ಪತ್ರೆ ಸಿಬ್ಬಂದಿ ಭಾಗವಹಿಸಿದ್ದರು.