ಶಿವಮೊಗ್ಗ :ರಾಜ್ಯ ಸರ್ಕಾರ ಮುಂದಿನ ವಿಧಾನಸಭೆಯ ಅಧಿವೇಶನದಲ್ಲಿ ನಿವೃತ್ತ ನ್ಯಾ. ಎ ಜೆ ಸದಾಶಿವ ಆಯೋಗದ ವರದಿ ಮಂಡಿಸಿ, ಒಳಮೀಸಲಾತಿ ಕಾಯ್ದೆ ಜಾರಿಗೊಳಿಸಿ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಲಾಯಿತು.
ಒಳಮೀಸಲಾತಿ ಕಾಯ್ದೆ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ - ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಮಾಡಿಲ್ಲ. ಹಾಗಾಗಿ ರಾಜ್ಯ ಸರ್ಕಾರವು ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿ ಮಂಡಿಸಿ, ಒಳಮೀಸಲಾತಿ ಕಾಯ್ದೆ ಜಾರಿಗೊಳಿಸಿ ಆದೇಶಿಸಬೇಕು..
ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಹೋರಾಟ ನಡೆಸುತ್ತಿದೆ. ಸದಾಶಿವ ಆಯೋಗದ ವರದಿ ಸರ್ಕಾರಕ್ಕೆ ತಲುಪಿದ್ದರೂ ಕೂಡ ಈವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಸದನದಲ್ಲಿ ಮಂಡಿಸಿ ಚರ್ಚಿಸಿಲ್ಲ. ಒಳ ಮೀಸಲಾತಿ ಕಾಯ್ದೆ ಜಾರಿಗೊಳಿಸಿಲ್ಲ ಎಂದು ಪ್ರತಿಭಟನಾಕಾರರು ಕಿಡಿ ಕಾರಿದರು.
ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಮಾಡಿಲ್ಲ. ಹಾಗಾಗಿ ರಾಜ್ಯ ಸರ್ಕಾರವು ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿ ಮಂಡಿಸಿ, ಒಳಮೀಸಲಾತಿ ಕಾಯ್ದೆ ಜಾರಿಗೊಳಿಸಿ ಆದೇಶಿಸಬೇಕು. ಇಲ್ಲವಾದ್ರೆ ರಾಜ್ಯ ಸರ್ಕಾರದ ವಿರುದ್ಧ ದಲಿತ ಸಂಘರ್ಷ ಸಮಿತಿ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಎಚ್ಚರಿಸಿ ಪ್ರತಿಭಟಿಸಿದರು.