ಶಿವಮೊಗ್ಗ:ಹೈದರಾಬಾದ್ನ ಪಶು ವೈದ್ಯಾಧಿಕಾರಿ ಮೇಲೆ ನಡೆದ ಅತ್ಯಾಚಾರ ಹಾಗೂ ನಂತರದ ವಿಕೃತ ಕ್ರೌರ್ಯ, ಮಾನವ ಸಮಾಜ ತಲೆ ತಗ್ಗಿಸುವಂತಹ ಘಟನೆಯಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಎನ್ ಎಸ್ ಯುಐ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಅತ್ಯಾಚಾರವೆಸಗಿ ಪಶುವೈದ್ಯೆಯ ಕೊಲೆ ಖಂಡಿಸಿ ಎನ್ಎಸ್ಯುಐನಿಂದ ಪ್ರತಿಭಟನೆ
ಹೈದರಾಬಾದ್ನ ಸರ್ಕಾರಿ ಪಶು ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದನ್ನು ಖಂಡಿಸಿ, ಅತ್ಯಾಚಾರಿಗಳನ್ನು ಶೀಘ್ರವೇ ಗಲ್ಲಿಗೇರಿಸುವಂತೆ ಒತ್ತಾಯಿಸಿ, ಶಿವಮೊಗ್ಗ ಜಿಲ್ಲಾ ಎನ್ಎಸ್ಯುಐ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಪಶುವೈದ್ಯೆಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ನಡೆಸಿ ಜೀವಂತವಾಗಿ ಸುಟ್ಟುಹಾಕಿದ ನಾಲ್ವರು, ರಕ್ಕಸ ಕೃತ್ಯವೆಸಗಿದ್ದಾರೆ. ಅಲ್ಲದೆ ರಾಜಸ್ಥಾನದ ಜೈಪುರದಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ. ಇತ್ತಿಚೇಗೆ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಎಗ್ಗಿಲ್ಲದೆ ನಡೆಯುತ್ತಿವೆ. ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿದೆ. ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಕಾಮಾಂಧರಿಗೆ ಕಾನೂನಿನ ಮೂಲಕ ಕಠಿಣ ಶಿಕ್ಷೆ ಆಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಹಿಳಾ ದೌರ್ಜನ್ಯ ತಡೆಗೆ ವಿಶೇಷ ಕೋರ್ಟ್ ಸ್ಥಾಪಿಸಬೇಕು. ಇಂತಹ ದೌರ್ಜನ್ಯ ಎಸಗಿದವರಿಗೆ ಸಾರ್ವಜನಿಕವಾಗಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಲಾಯಿತು. ಪ್ರತಿಭಟನೆಯಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದರು.