ಕರ್ನಾಟಕ

karnataka

ವಿದ್ಯಾಸಿರಿ ವೇತನದ ಅರ್ಜಿ ತಿರಸ್ಕಾರ: ಎಬಿವಿಪಿಯಿಂದ ಪ್ರತಿಭಟನೆ

By

Published : Dec 12, 2019, 11:21 PM IST

ಆಧಾರ್​ ಮಾಹಿತಿ ಸರಿ ಹೊಂದುತ್ತಿಲ್ಲ ಎಂಬ ಮಾಹಿತಿ ನೀಡಿ ವಿದ್ಯಾಸಿರಿ ವಿದ್ಯಾರ್ಥಿ ವೇತನದ ಅರ್ಜಿ ತಿರಸ್ಕರಿಸಿದ ಹಿನ್ನೆಲೆ ಇಂದು ಎಬಿವಿಪಿ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.

protest from ABVP
ಎಬಿವಿಪಿಯಿಂದ ಪ್ರತಿಭಟನೆ


ಶಿವಮೊಗ್ಗ: ಮೆಟ್ರಿಕ್ ನಂತರದ ವಿದ್ಯಾಸಿರಿ ವಿದ್ಯಾರ್ಥಿ ವೇತನದ ಅರ್ಜಿಗಳನ್ನು ಆಧಾರ್ ಮಾಹಿತಿ ಸರಿ ಹೊಂದದ ಕಾರಣ ನೀಡಿ, ಅರ್ಜಿ ತಿರಸ್ಕರಿಸಿರುವುದನ್ನ ಹಿಂಪಡೆಯಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಮೆಟ್ರಿಕ್ ನಂತರದ ವಿದ್ಯಾಸಿರಿ ವೇತನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಕ್ಟೋಬರ್ ತಿಂಗಳಿನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಅದರಂತೆ ಈ ವರ್ಷ 8.5 ಲಕ್ಷಕ್ಕಿಂತ ಅಧಿಕ ವಿದ್ಯಾರ್ಥಿಗಳು, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ವಿದ್ಯಾರ್ಥಿಗಳ ಆದಾರ್ ಮಾಹಿತಿ ಸರಿ ಹೊಂದುತ್ತಿಲ್ಲ ಎಂಬ ಕಾರಣ ನೀಡಿ ಸುಮಾರು 58 ಸಾವಿರಕ್ಕಿಂತ ಹೆಚ್ಚು ವಿದ್ಯಾರ್ಥಿಗಳ ಶಿಷ್ಯವೇತನ ಅರ್ಜಿಯನ್ನು ತಿರಸ್ಕರಿಸಲಾಗಿದೆ.

ಎಬಿವಿಪಿಯಿಂದ ಪ್ರತಿಭಟನೆ

ವಿದ್ಯಾರ್ಥಿ ವೇತನವನ್ನು ನಂಬಿಕೊಂಡು ವಿದ್ಯಾಭ್ಯಾಸ ಮಾಡುತ್ತಿರುವ ಅನೇಕ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ತೊಂದರೆಯಾಗುತ್ತಿದೆ. ಆದ್ದರಿಂದ ಸರ್ಕಾರ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಈ ಕೂಡಲೇ ಕ್ರಮ ಕೈಗೊಳ್ಳಬೇಕು ಮತ್ತು ತಿರಸ್ಕಾರ ಮಾಡಿರುವ ಎಲ್ಲಾ ವಿದ್ಯಾರ್ಥಿಗಳ ವಿದ್ಯಾಸಿರಿ ವೇತನ ಅರ್ಜಿಗಳನ್ನು ಸ್ವೀಕರಿಸಿ, ವಿದ್ಯಾರ್ಥಿ ವೇತನ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಿದರು.

ABOUT THE AUTHOR

...view details