ಶಿವಮೊಗ್ಗ:ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಸಾರ್ವಜನಿಕರ ಆಸ್ತಿ ಹಾಳು ಮಾಡಿರುವ ಅಪರಾಧಿಗಳಿಗೆ ಗಲ್ಲು ಶಿಕ್ಷೆಯಂತಹ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
'ಗಲಭೆ ವೇಳೆ ಆಸ್ತಿ ಹಾಳು ಮಾಡಿರುವ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಿ' - Bangaluru case issue
ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿಯಲ್ಲಿ ನಡೆದ ಗಲಭೆಯ ಪ್ರಕರಣದಲ್ಲಿ ಎಸ್ಡಿಪಿಐ ಸಂಘಟನೆ ತೊಡಗಿರುವುದು ಈಗಾಗಲೇ ಬಹಿರಂಗವಾಗಿದೆ. ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡಿರುವ ಸಂಘಟನೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಭಾರತೀಯ ಜನತಾ ಪಾರ್ಟಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ
ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಎಸ್ಡಿಪಿಐ ಸಂಘಟನೆ ತೊಡಗಿರುವುದು ಈಗಾಗಲೇ ಬಹಿರಂಗವಾಗಿದೆ. ಇಂತಹ ಗಲಭೆಕೋರರಿಗೆ ಗಲ್ಲು ಶಿಕ್ಷೆಯಂತಹ ಕಠಿಣವಾದ ಶಿಕ್ಷೆ ನೀಡಬೇಕು, ಉತ್ತರ ಪ್ರದೇಶದ ಮಾದರಿಯಲ್ಲಿ ಗಲಭೆಕೋರರ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಮಾಡಬೇಕು, ಸರ್ಕಾರ ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖಾ ತಂಡಕ್ಕೆ ವಹಿಸಬೇಕು ಹಾಗೂ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡಿರುವ ಸಂಘಟನೆಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.