ಕರ್ನಾಟಕ

karnataka

ETV Bharat / state

'ಅಕ್ಷರ ದಾಸೋಹ ಹೊರಗುತ್ತಿಗೆ ನೌಕರರನ್ನು ಕೈಬಿಟ್ಟರೆ ಬೀದಿಗಿಳಿದು ಹೋರಾಟ' - Outsourced employees

ಅಕ್ಷರ ದಾಸೋಹದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಹಂತದ ಕಚೇರಿಗಳಲ್ಲಿ 410 ನೌಕರರು ಸುಮಾರು 10-12 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಅವರ ಸೇವಾ ಅವಧಿ ಮಾರ್ಚ್ 31ಕ್ಕೆ ಮುಕ್ತಾಯವಾಗಿದೆ. ಇವರನ್ನು ಕೆಲಸದಿಂದ ಕೈಬಿಟ್ಟರೆ ಹೋರಾಟ ನಡೆಸುವುದಾಗಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಎಚ್ಚರಿಕೆ ನೀಡಿದೆ.

we will protest if outsourced employees of Akshara dasoha will be taken down
ಅಕ್ಷರ ದಾಸೋಹ ಹೊರಗುತ್ತಿಗೆ ನೌಕರರನ್ನು ಕೈಬಿಟ್ಟರೆ ಬೀದಿಗಿಳಿದು ಹೋರಾಟ: ನೌಕರರ ಸಂಘ ಎಚ್ಚರಿಕೆ

By

Published : May 9, 2020, 8:11 PM IST

ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿಯ ಯೋಜನೆ ಅಕ್ಷರ ದಾಸೋಹ ಕಾರ್ಯಕ್ರಮದಡಿ ಕೆಲಸ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ಕೈಬಿಟ್ಟಲ್ಲಿ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಅಕ್ಷರ ದಾಸೋಹ ಹೊರಗುತ್ತಿಗೆ ನೌಕರರನ್ನು ಕೈಬಿಟ್ಟರೆ ಬೀದಿಗಿಳಿದು ಹೋರಾಟ: ನೌಕರರ ಸಂಘ ಎಚ್ಚರಿಕೆ

ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಂಘದ ರಾಜ್ಯ ಸಂಘಟನಾ ಸಂಚಾಲಕ ಪರಮೇಶ ಹೊಸಕೊಪ್ಪ, ಅಕ್ಷರ ದಾಸೋಹ ಕಾರ್ಯಕ್ರಮದಡಿಯಲ್ಲಿ ಮಾನವ ಸಂಪನ್ಮೂಲ ಸೇವೆಯನ್ನು ಹೊರಗುತ್ತಿಗೆ ಆಧಾರದಲ್ಲಿ ಪಡೆಯಲು ಎಚ್‍ಆರ್​ಡಿ ಮಾರ್ಗಸೂಚಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಅದರಂತೆ ಅಕ್ಷರ ದಾಸೋಹದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಹಂತದ ಕಚೇರಿಗಳಲ್ಲಿ 410 ನೌಕರರು ಸುಮಾರು 10-12 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಅವರ ಸೇವಾ ಅವಧಿ ಮಾರ್ಚ್ 31ಕ್ಕೆ ಮುಕ್ತಾಯವಾಗಿದ್ದು, ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದರು.

ಆದರೂ ಪ್ರತಿವರ್ಷದಂತೆ ಈ ಸಾಲಿನಲ್ಲಿ ಕೆಲಸ ಮುಂದುವರಿಸುವ ಆದೇಶ ಆಗಬಹುದು ಎಂಬ ನಿರೀಕ್ಷೆಯಲ್ಲಿ ಇಂದಿಗೂ ಕಚೇರಿಗಳಲ್ಲಿ ವೇತನವಿಲ್ಲದೆ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಸರ್ಕಾರ ಇದೀಗ ಆಘಾತವನ್ನುಂಟುಮಾಡಿದೆ. ಇಲ್ಲಿಯವರೆಗೂ ಮಾನವ ಸಂಪನ್ಮೂಲ ಸೇವೆಯನ್ನು ಮುಂದುವರೆಸುವ ಕುರಿತು ಯಾವುದೇ ಆದೇಶ ಹೊರಡಿಸದೆ ನೌಕರರನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ದೂರಿದರು.

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿದರೆ ಹೊರಗುತ್ತಿಗೆ ನೌಕರರ ಸೇವೆಯನ್ನು ಮುಂದುವರಿಸುವ ಯಾವುದೇ ಸಾಧ್ಯತೆಗಳಿಲ್ಲ ಎಂದು ತಿಳಿಸಿದ್ದಾರೆ. ಸುಮಾರು 10-12 ವರ್ಷಗಳಿಂದ ಅಕ್ಷರ ದಾಸೋಹ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸಿ ತಮ್ಮ ಬದುಕನ್ನು ಕಟ್ಟಿಕೊಂಡಿರುವ ಕಾರ್ಮಿಕರು ಇದರಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಕಾರ್ಮಿಕರಿಗೆ ಕೆಲಸದಲ್ಲಿ ಮುಂದುವರಿಸಲು ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.

ABOUT THE AUTHOR

...view details