ಶಿವಮೊಗ್ಗ: ದೇಶದಲ್ಲಿ ದಿನೇ ದಿನೆ ಹೆಚ್ಚುತ್ತಿರುವ ತೈಲ ಬೆಲೆ ಏರಿಕೆ ಖಂಡಿಸಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸೈಕಲ್ ಜಾಥಾ ನಡೆಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು.
ತೈಲ ಬೆಲೆ ಏರಿಕೆ ಖಂಡಿಸಿ ಸೈಕಲ್ ಜಾಥಾ ಮೂಲಕ ಪ್ರತಿಭಟನೆ ನಡೆಸಿದ ಕಿಮ್ಮನೆ ರತ್ನಾಕರ್! - ಸೈಕಲ್ ಜಾಥ ಮೂಲಕ ಪ್ರತಿಭಟನೆ ನಡೆಸಿದ ಕಿಮ್ಮನೆ ರತ್ನಾಕರ್
ದೇಶದಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿರುವ ಇಂಧನ ಬೆಲೆಯನ್ನು ಖಂಡಿಸಿ, ತೀರ್ಥಹಳ್ಳಿ ಕ್ಷೇತ್ರದ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ಇಂದು ಹೊಸನಗರದಲ್ಲಿ ಸೈಕಲ್ ಜಾಥಾ ಮೂಲಕ ಪ್ರತಿಭಟಿಸಿದರು.
ಸೈಕಲ್ ಜಾಥ ಮೂಲಕ ಪ್ರತಿಭಟನೆ ನಡೆಸಿದ ಕಿಮ್ಮನೆ
ಹೊಸನಗರ ಪಟ್ಟಣದ ಬಸ್ ನಿಲ್ದಾಣದಿಂದ ತಹಶೀಲ್ದಾರ್ ಕಚೇರಿಯವರೆಗೆ ಸೈಕಲ್ ಜಾಥಾ ನಡೆಸಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಾಗತಿಕವಾಗಿ ತೈಲ ಬೆಲೆ ಕುಸಿತವಾಗಿದ್ದರೂ ಸಹ ನಮ್ಮ ದೇಶದಲ್ಲಿ ಮಾತ್ರ ಇಂಧನ ಬೆಲೆ ಕಡಿಮೆಯಾಗುತ್ತಿಲ್ಲ. ಅಚ್ಚೇ ದಿನ್ ಎಂದು ಹೇಳಿದ ಮೋದಿ, ಈಗ ತೈಲ ಬೆಲೆ ಏರಿಕೆ ಮಾಡಿ, ಸೈಕಲ್‌ನಲ್ಲಿ ಓಡಾಡುವಂತೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸೈಕಲ್ ಜಾಥಾ ಬಳಿಕ ತಹಶೀಲ್ದಾರ್ ರಾಜೀವ್ ಅವರಿಗೆ ಕಿಮ್ಮನೆ ಮನವಿ ಪತ್ರ ಸಲ್ಲಿಸಿದ್ದು, ಈ ಕೂಡಲೇ ದೇಶದ ಎಲ್ಲಾ ಭಾಗಗಳಲ್ಲಿಯೂ ಇಂಧನ ಬೆಲೆಯ ಹೊರೆ ತಗ್ಗಿಸಬೇಕು ಎಂದು ಆಗ್ರಹಿಸಿದರು.