ಶಿವಮೊಗ್ಗ:ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಖಂಡಿಸಿ ವಿವಿಧ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಹೊಸನಗರ ತಾಲೂಕು ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ.. - ಹೊಸನಗರ ತಾಲೂಕು ಆಸ್ಪತ್ರೆ ಅವ್ಯವಸ್ಥೆ
ಹೊಸನಗರ ತಾಲೂಕು ಆಸ್ಪತ್ರೆ ಅವ್ಯವಸ್ಥೆಯಿಂದ ಕೂಡಿದೆ. ಸಾರ್ವಜನಿಕರಿಗೆ, ರೋಗಿಗಳಿಗೆ ಯಾವುದೇ ಆರೋಗ್ಯ ಸೌಲಭ್ಯ ಸಿಗದ ಹಿನ್ನೆಲೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಇದನ್ನ ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿ ವಿವಿಧ ಸೌಲಭ್ಯವನ್ನು ಸರ್ಕಾರ ಒದಗಿಸಿದ್ದರೂ ಸಹ ಅದನ್ನು ಸಾರ್ವಜನಿಕರಿಗೆ ತಲುಪಿಸಲು ಅಧಿಕಾರಿಗಳು ವಿಫಲರಾಗುತ್ತಿದ್ದಾರೆ. ಅಲ್ಲದೆ ಆಸ್ಪತ್ರೆಯಲ್ಲಿನ ವೈದ್ಯರಿಗೆ ಇಲ್ಲಿನ ಸಿಬ್ಬಂದಿ ಸರಿಯಾದ ಸಹಕಾರ ನೀಡದಿರುವುದು, ರಾತ್ರಿ ಪಾಳಿಯಲ್ಲಿ ಸರಿಯಾಗಿ ಕಾರ್ಯನಿರ್ವಹಿಸದೆ ಇರುವುದು ಹೀಗೆ ಹಲವು ಸಮಸ್ಯೆಗಳಿಂದ ಆಸ್ಪತ್ರೆ ಬಳಲುತ್ತಿದೆ ಎಂದು ಆರೋಪಿಸಿದರು.
ಅಲ್ಲದೆ ಇಲ್ಲಿ ಕಾರ್ಯನಿರ್ವಹಿಸಲು ಪೂರಕ ವಾತಾವರಣ ಇಲ್ಲದ ಕಾರಣ ಇಲ್ಲಿನ ವೈದ್ಯರು ಬೇರೆ ಕಡೆ ವರ್ಗಾವಣೆಯಾಗುತ್ತಾರೆ ಅಥವಾ ಕೆಲಸಕ್ಕೆ ರಾಜೀನಾಮೆ ನೀಡಿ ಹೋಗುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.