ಶಿವಮೊಗ್ಗ:ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ನಗರದ ಈದ್ಗಾ ಮೈದಾನದಲ್ಲಿ 'ವುಮೆನ್ ಯುನೈಟೆಡ್‌ಮೂವ್‌ಮೆಂಟ್'ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ರಾಷ್ಟ್ರಗೀತೆ ಹಾಡಿ, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪ್ರತಿಭಟನಾಕಾರರು ಗುಲಾಬಿ ಹೂವನ್ನು ಕೊಟ್ಟರು.
ಸಿಎಎ ವಿರೋಧಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ... ಪೊಲೀಸರಿಗೆ ಗುಲಾಬಿ ಹೂ ಕೊಟ್ಟ ಪ್ರತಿಭಟನಾಕಾರರು - ಶಿವಮೊಗ್ಗದ ಈದ್ಗಾ ಮೈದಾನದಲ್ಲಿ ಪ್ರತಿಭಟನೆ
ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಶಿವಮೊಗ್ಗದ ಈದ್ಗಾ ಮೈದಾನದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಿಎಎ ವಿರೋಧಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ
ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಬಳಿಕ ವಿದ್ಯಾರ್ಥಿಗಳನ್ನು ಪೊಲೀಸರು ವಾಪಸ್ ಕಳುಹಿಸಿದರು. ಆದರೆ ಮತ್ತೆ ಮಹಿಳೆಯರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರೆಸಿ, ಪೌರತ್ವ ಮಸೂದೆ ರದ್ದುಗೊಳಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.