ಶಿವಮೊಗ್ಗ: ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ, ಮುಸ್ಲಿಂ ಮಹಿಳೆಯರು ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು. ನಗರದ ಸರ್. ಎಂ. ವಿಶ್ವೇಶ್ವರಯ್ಯ ರಸ್ತೆಯ ಈದ್ಗಾ ಮೈದಾನದಲ್ಲಿ ಜಮಾವಣೆಗೊಂಡ ಮುಸ್ಲಿಂ ಮಹಿಳೆಯರು, ಸಿಎಎ, ಎನ್ಆರ್ಸಿ ಹಾಗೂ ಎನ್ಪಿಆರ್ ವಿರೋಧಿಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಿಎಎಗೆ ವಿರೋಧ: ಶಿವಮೊಗ್ಗದಲ್ಲಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ - ಶಿವಮೊಗ್ಗದಲ್ಲಿ ಮೇಣದ ಬತ್ತಿ ಹಿಡಿದ ಮುಸ್ಲಿಂ ಮಹಿಳೆಯರು
ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ, ಶಿವಮೊಗ್ಗದಲ್ಲಿ ಮುಸ್ಲಿಂ ಮಹಿಳೆಯರು ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.
ಶಿವಮೊಗ್ಗದಲ್ಲಿ ಸಿಎಎ ವಿರೋಧಿಸಿ ಪ್ರತಿಭಟನೆ
ರಾಷ್ಟ್ರಧ್ವಜವನ್ನು ಹಿಡಿದುಕೊಂಡು ನಾವು ಭಾರತೀಯರು. ನಾವೇಕೆ ಪೌರತ್ವಕ್ಕಾಗಿ ಅರ್ಜಿ ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಸಂಖ್ಯೆಯ ಮುಸ್ಲಿಂ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.