ಕರ್ನಾಟಕ

karnataka

ETV Bharat / state

ಶಿವಮೊಗ್ಗ: ಕಾರ್ಮಿಕ ವಿರೋಧಿ ಕಾಯ್ದೆ ಪ್ರತಿಭಟನೆಗೆ ವ್ಯಾಪಕ ಬೆಂಬಲ - Protest in Shimoga against anti-people act

ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೇಂದ್ರ ಸರ್ಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು.

protest-in-shimoga-against-the-anti-labor-law
ಕಾರ್ಮಿಕ ವಿರೋಧಿ ಕಾಯ್ದೆ ವಿರೋಧಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

By

Published : Nov 26, 2020, 5:12 PM IST

ಶಿವಮೊಗ್ಗ: ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆದಿದ್ದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ನಗರದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೇಂದ್ರ ಸರ್ಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು.

ರೈತ ಸಂಘದ ಮುಖಂಡ ಬಸವರಾಜಪ್ಪ ಮಾತನಾಡಿದರು

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಜನವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಜಾರಿಗೆ ತರುವ ಮೂಲಕ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ಹಾಗಾಗಿ, ಕೂಡಲೇ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾಯ್ದೆಗಳನ್ನು ಹಿಂಪಡೆಯಬೇಕು ಇಲ್ಲವಾದರೆ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಜನ ನಿಮ್ಮನ್ನು ಮನೆಗೆ ಕಳುಹಿಸುತ್ತಾರೆ ಎಂದು ಆಗ್ರಹಿಸಿ ಬಹೃತ್ ಪ್ರತಿಭಟನೆ ನಡೆಸಲಾಯಿತು.

For All Latest Updates

ABOUT THE AUTHOR

...view details