ಶಿವಮೊಗ್ಗ:ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದ ಅತ್ಯಾಚಾರ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ತಮಟೆ ಬಾರಿಸುವ ಮೂಲಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಹತ್ರಾಸ್ ಘಟನೆ ಖಂಡಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ - Protest in Shimoga for Condemning the Hatras Incident
ಹತ್ರಾಸ್ನಲ್ಲಿ ಯುವತಿಯ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಹಾಗೂ ಯೋಗಿ ಆದಿತ್ಯನಾಥ್ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ಶಿವಮೊಗ್ಗ ನಗರದಲ್ಲಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿತು.
ಯುವತಿಯ ಮೇಲೆ ಅತ್ಯಾಚಾರವೆಸಗಿದ ಕ್ರೂರಿಗಳನ್ನು ಗಲ್ಲಿಗೇರಿಸಬೇಕು ಹಾಗೂ ಅತ್ಯಾಚಾರಗಳನ್ನು ತಡೆಗಟ್ಟುವಲ್ಲಿ ವಿಫಲವಾಗಿರುವ ಯೋಗಿ ಆದಿತ್ಯಾನಾಥ್ ನೇತೃತ್ವದ ಬಿಜೆಪಿ ಸರ್ಕಾರವನ್ನು ರಾಷ್ಟ್ರಪತಿಗಳು ಕೂಡಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶದ ಸರ್ಕಾರದ ವಿರುದ್ದ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಅತ್ಯಾಚಾರಕ್ಕೊಳಗಾದ ಯುವತಿಯ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಬೇಕು ಹಾಗೂ ಈ ಕೂಡಲೇ ಅತ್ಯಾಚಾರಿಗಳನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.