ಶಿವಮೊಗ್ಗ:ದೆಹಲಿಯಲ್ಲಿ ಸಿಎಎ ಪ್ರತಿಭಟನೆಯ ವೇಳೆ ನಡೆದ ಹಿಂಸಚಾರವನ್ನು ಖಂಡಿಸಿ, ಸಾಗರದ ಟಿಪ್ಪು ಸಹಾರ ಯುವಜನ ಸಂಘದವರು ಇಲ್ಲಿನ ಶಿವಪ್ಪನಾಯಕ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ದೆಹಲಿ ಹಿಂಸಾಚಾರ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ
ಸಿಎಎ ಪ್ರತಿಭಟನೆಯ ವೇಳೆ ದೆಹಲಿಯಲ್ಲಿ ನಡೆದ ಹಿಂಸಚಾರವನ್ನು ಖಂಡಿಸಿ, ಟಿಪ್ಪು ಸಹಾರ ಯುವಜನ ಸಂಘ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಟಿಪ್ಪು ಸಹರಾ ಯುವಜನ ಸಂಘಟನೆಯ ಅಧ್ಯಕ್ಷ ಸೈಯದ್ ಜಮೀಲ್, ದೆಹಲಿಯಲ್ಲಿ ನಡದ ಗಲಭೆಗೆ ಕೇಂದ್ರ ಸರ್ಕಾರವೇ ನೇರ ಕಾರಣ. ಯಾರಿಗೂ ಬೇಡವಾದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದು ದೇಶದಲ್ಲಿ ಅಶಾಂತಿ ವಾತಾವರಣ ಸೃಷ್ಟಿಸುವ ಕೆಲಸ ಕೇಂದ್ರ ಸರ್ಕಾರ ಮಾಡಿದೆ. ದೆಹಲಿಯಲ್ಲಿ ನಡೆದ ಗಲಭೆಯಲ್ಲಿ 53 ಜನ ಅಮಾಯಕರು ಸಾವನ್ನಪ್ಪಿದ್ದು, ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಕೇಂದ್ರ ಸರ್ಕಾರ ಮನಸ್ಸು ಮಾಡಿದ್ದರೆ ಒಂದು ದಿನದಲ್ಲಿ ಶಾಂತಿ ನೆಲೆಸುವಂತೆ ಮಾಡಬಹುದಿತ್ತು. ಆದರೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ವೈಫಲ್ಯದಿಂದ ಐದು ದಿನಗಳಲ್ಲಿ ದೆಹಲಿಯ ಕೆಲ ಪ್ರದೇಶ ಹಿಂಸಾಚಾರದಿಂದ ಹೊತ್ತಿ ಉರಿದಿದೆ ಎಂದು ಆರೋಪಿಸಿದರು.
ಶಾಂತಿ ಸ್ಥಾಪನೆ ಮಾಡುವಲ್ಲಿ ವಿಫಲವಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
TAGGED:
ಸಿಎಎ ಪ್ರತಿಭಟನೆ