ಶಿವಮೊಗ್ಗ: ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಕರ್ನಾಟಕ ವಿಧಾನ ಸಭೆಯಲ್ಲಿ ತಿರಸ್ಕರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದರು ಪ್ರತಿಭಟನೆ ನಡೆಸಲಾಯಿತು.
ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ತಿರಸ್ಕರಿಸುವಂತೆ ಒತ್ತಾಯಿಸಿ ಪ್ರತಿಭಟನೆ - Land Reform Amendment Act
ರೈತರಿಗೆ ಮರಣ ಶಾಸನವಾಗಿರುವ ಭೂ ಸುಧಾರಣಾ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ವಿಧಾನ ಸಭೆಯಲ್ಲಿ ಮಂಡನೆ ಮಾಡಬಾರದು ಜನ ವಿರೋಧಿ ಕಾಯ್ದೆಗಳನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಲಾಯಿತು.
ಪ್ರತಿಭಟನೆ
ರೈತರಿಗೆ ಮರಣ ಶಾಸನವಾಗಿರುವ ಭೂ ಸುಧಾರಣಾ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ವಿಧಾನ ಸಭೆಯಲ್ಲಿ ಮಂಡನೆ ಮಾಡಬಾರದು ಜನ ವಿರೋಧಿ ಕಾಯ್ದೆಗಳನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಲಾಯಿತು.
ಕೇಂದ್ರ ಸರ್ಕಾರ ಜನ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ರೈತರ ಭೂ ಹಕ್ಕಿನ ಸ್ವಾತಂತ್ರ್ಯವನ್ನು ಹರಣ ಮಾಡಲು ಹೊರಟಿದೆ. ರೈತ ವಿರೋಧಿ ಕಾಯ್ದೆಗಳಾದ ಎಪಿಎಂಸಿ ತಿದ್ದುಪಡಿ ಕಾಯ್ದೆ, ವಿದ್ಯುತ್ ಖಾಸಗೀಕರಣ, ಕೇಂದ್ರ ಸರ್ಕಾರದ ಅಗತ್ಯ ವಸ್ತುಗಳ ನಿಯಂತ್ರಣ ತಿದ್ದುಪಡಿ ಕಾಯ್ದೆ ಸೇರಿದಂತೆ ಎಲ್ಲಾ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರಬಾರದು ಎಂದು ಪ್ರತಿಭಟಿಸಿದರು.