ಕರ್ನಾಟಕ

karnataka

ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರಿಂದ ಶಿವಮೊಗ್ಗದಲ್ಲೂ ಪ್ರತಿಭಟನೆ

By

Published : Jul 9, 2019, 10:25 PM IST

ಬಿಜೆಪಿ ಕುದುರೆ ವ್ಯಾಪಾರದಲ್ಲಿ ತೊಡಗಿದ್ದು, ಕಾಂಗ್ರೆಸ್ ಶಾಸಕರಿಗೆ ಆಮಿಷವೊಡ್ಡಿ ಪ್ರಜಾಪ್ರಭುತ್ವವನ್ನೇ ಕಗ್ಗೊಲೆ ಮಾಡುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು, ಇತ್ತ ಬಿಜೆಪಿ ಮುಖಂಡರು ಸಿಎಂ ರಾಜೀನಾಮೆಗೆ ಆಗ್ರಹಿಸಿ ಇಂದು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್, ಬಿಜೆಪಿ ಪಕ್ಷಗಳ ಪ್ರತಿಭಟನೆ

ಶಿವಮೊಗ್ಗ:ಬಿಜೆಪಿ ಕುದುರೆ ವ್ಯಾಪಾರದಲ್ಲಿ ತೊಡಗಿದ್ದು, ಕಾಂಗ್ರೆಸ್ ಶಾಸಕರಿಗೆ ಆಮಿಷವೊಡ್ಡಿ ಪ್ರಜಾಪ್ರಭುತ್ವವನ್ನೇ ಕಗ್ಗೊಲೆ ಮಾಡುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಜಿಲ್ಲೆಯ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರೆ, ಇತ್ತ ಬಿಜೆಪಿ ಮುಖಂಡರು ಸಿಎಂ ರಾಜೀನಾಮೆಗೆ ಆಗ್ರಹಿಸಿ ಶಿವಪ್ಪನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿಗೆ ಬಿಜೆಪಿಯೇ ಕಾರಣ. ಪಕ್ಷದ ಮುಖಂಡರ ಕುಮ್ಮಕ್ಕಿನಿಂದ ಪ್ರಜಾಪ್ರಭುತ್ವ ವ್ಯವಸ್ಥೆಯೇ ದಾರಿ ತಪ್ಪುತ್ತಿದೆ. ಇದೊಂದು ಅಸಂವಿಧಾನಿಕ ಕ್ರಿಯೆ. ಮೈತ್ರಿ ಸರ್ಕಾರವನ್ನು ಉರುಳಿಸುವ ಮತ್ತು ಅಧಿಕಾರದ ದಾಹಕ್ಕಾಗಿ ಹಪಹಪಿಸುವ ಬಿಜೆಪಿ ನೇರಾನೇರ ಯುದ್ಧ ಮಾಡುವುದು ಬಿಟ್ಟು ಹಿಂಬಾಗಿಲಿನಿಂದ ಪ್ರವೇಶ ಪಡೆಯುವುದು ಎಷ್ಟರ ಮಟ್ಟಿಗೆ ಸರಿ. ಇಂತಹ ಮನೆಮುರುಕ ಕೆಲಸವನ್ನು ಬಿಜೆಪಿ ಬಿಡಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದರು. ಬಿಜೆಪಿ ಮುಖಂಡರ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅತ್ತ ಕಾಂಗ್ರೆಸ್ ಮುಖಂಡರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರೆ, ಇತ್ತ ಬಹುಮತ ಕಳೆದುಕೊಂಡಿರುವ ಸಮ್ಮಿಶ್ರ ಸರ್ಕಾರ ತಕ್ಷಣವೇ ರಾಜೀನಾಮೆ ನೀಡಿ ತೊಲಗಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಶಿವಪ್ಪನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಸಮ್ಮಿಶ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರಲ್ಲದೇ ಸರ್ಕಾರ ಸಂಖ್ಯಾಬಲವನ್ನೇ ಕಳೆದುಕೊಂಡಿದೆ. ಆದರೂ ಮುಖ್ಯಮಂತ್ರಿ ಕುಮಾರಸ್ವಾಮಿ ಇನ್ನೂ ಕುರ್ಚಿಗೆ ಅಂಟಿಕೊಂಡು ಕುಳಿತಿದ್ದಾರೆ. ತಕ್ಷಣವೇ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

For All Latest Updates

TAGGED:

ABOUT THE AUTHOR

...view details