ಶಿವಮೊಗ್ಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ಪಂಚಾಯತ್ ಕಚೇರಿ ಎದುರು ಬಿಸಿಯೂಟ ನೌಕರರು ಪ್ರತಿಭಟನೆ ನಡೆಸಿದರು.
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ - ವಿವಿಧ ಬೇಡಿಕೆ ಈಡೆರಿಸುವಂತೆ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ
ಸರ್ಕಾರ ಸುಳ್ಳು ಆಶ್ವಾಸನೆ ನೀಡುವುದನ್ನು ಬಿಟ್ಟು ಬಿಸಿಯೂಟ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಪಂಚಾಯತ್ ಕಚೇರಿ ಎದುರು ಬಿಸಿಯೂಟ ನೌಕರರು ಪ್ರತಿಭಟನೆ ನಡೆಸಿದರು.
ಬಿಸಿಯೂಟ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು, ನಮ್ಮ ಬೇಡಿಕೆಗಳು ಈಡೇರುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ಹಾಗಾಗಿ ಸರ್ಕಾರ ಸುಳ್ಳು ಆಶ್ವಾಸನೆ ನೀಡುವುದನ್ನು ಬಿಟ್ಟು ಬಿಸಿಯೂಟ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕು. ಕೊರೊನಾದಿಂದಾಗಿ ಶಾಲೆಗಳು ತೆರೆದಿಲ್ಲ. ಹಾಗಾಗಿ ಬಿಸಿಯೂಟ ಕಾರ್ಯಕರ್ತೆಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ಏಪ್ರಿಲ್ ತಿಂಗಳಿನಿಂದ ಇಲ್ಲಿವರೆಗಿನ ವೇತನ ಪಾವತಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಒಂದು ಲಕ್ಷದ ಇಪ್ಪತ್ತು ಸಾವಿರ ಬಿಸಿಯೂಟ ಕಾರ್ಯಕರ್ತೆಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕುರಿತು ಶಾಸಕರು, ಸಂಸದರು ಮುಖ್ಯಮಂತ್ರಿಗಳ ಬಳಿ ಮಾತನಾಡಿ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟಿಸಿದರು.