ಶಿವಮೊಗ್ಗ:ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಜಿಲ್ಲಾಧಿಕಾರಿ ಕಛೇರಿ ಎದುರು ವಿವಿಧ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ - Protest by labor unions in Shimoga
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮತ್ತು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ವಿವಿಧ ಸಂಘಟನೆಗಳು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿವೆ.
ಕೇಂದ್ರ - ರಾಜ್ಯ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ
ಲಾಕ್ಡೌನ್ ಸಂದರ್ಭದಲ್ಲಿ ಕೇಲಸ ಕಳೆದುಕೊಂಡ ಬಡ ಕಾರ್ಮಿಕರಿಗೆ ಸರ್ಕಾರ ಸಹಾಯ ಹಸ್ತ ಚಾಚಬೇಕು ಹಾಗೂ ಕೈಗಾರಿಕೆಗಳ ಖಾಸಗೀಕರಣ ನಿಲ್ಲಿಸಬೇಕು, ಬಿಸಿಯೂಟ ನೌಕರರಿಗೆ ಕನಿಷ್ಠ 6 ತಿಂಗಳವರೆಗೆ ಪಡಿತರವನ್ನು ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಇದಲ್ಲದೆ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು, ಎಂಪಿಎಂ ಹಾಗೂ ವಿಐಎಸ್ಎಲ್ ಕೈಗಾರಿಕೆಗಳನ್ನು ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕು ಎಂದು ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದವು.