ಕರ್ನಾಟಕ

karnataka

ETV Bharat / state

ಸಾರ್ವಜನಿಕರ ಆಸ್ತಿ ಹಾಳು ಮಾಡಿರುವ ಪುಂಡರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ - Shimoga protest news

ಬೆಂಗಳೂರು ವ್ಯಾಪ್ತಿಯ ಡಿ.ಜೆ ಹಳ್ಳಿ ಮತ್ತು ಕೆ ಜಿ ಹಳ್ಳಿಯಲ್ಲಿ ಸಾರ್ವಜನಿಕರ ಆಸ್ತಿ ಹಾಳು ಮಾಡಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

Protest
ಬಿಜೆಪಿ ಯುವ ಮೋರ್ಚಾದ ವತಿಯಿಂದ ಪ್ರತಿಭಟನೆ

By

Published : Aug 12, 2020, 6:55 PM IST

ಶಿವಮೊಗ್ಗ: ಧಾರವಾಡ ಜಿಲ್ಲೆಯಲ್ಲಿ ಅಪ್ರಾಪ್ತ ಶಾಲಾ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿ ಬಷೀರ್ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ ಜಿ ಹಳ್ಳಿಯಲ್ಲಿ ಸಾರ್ವಜನಿಕರ ಆಸ್ತಿಯನ್ನು ಹಾಳು ಮಾಡಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ

ಪೊಲೀಸರು ಮತ್ತು ಮಾಧ್ಯಮದವರ ಮೇಲೆ ಹಲ್ಲೆ ಮಾಡಿರುವ ಪುಂಡರನ್ನು ಶೀಘ್ರವೇ ಬಂಧಿಸಬೇಕು ಎಂದು ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ ಒತ್ತಾಯಿಸಿದರು.

ABOUT THE AUTHOR

...view details