ಕರ್ನಾಟಕ

karnataka

ETV Bharat / state

ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ಮಾಹಿತಿ ನೀಡಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಮಗಳಲ್ಲಿ ಸ್ಮಶಾನಭೂಮಿ ಇಲ್ಲದಿರುವುದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಅಂತಹ ಗ್ರಾಮಗಳಲ್ಲಿ ಸರ್ಕಾರಿ ಭೂಮಿ ಇದ್ದಲ್ಲಿ ಗುರುತಿಸುವುದು ಅಥವಾ ಖಾಸಗಿ ವ್ಯಕ್ತಿಗಳು ಇಲಾಖೆಗೆ ಭೂಮಿ ಪರಭಾರೆ ಮಾಡುವವರಿದ್ದಲ್ಲಿಯೂ ವಿಚಾರಿಸಿ, ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮಾಹಿತಿ ನೀಡಬೇಕು. ಈ ಬಗ್ಗೆ ಎಲ್ಲಾ ತಹಶೀಲ್ದಾರರು ಗಮನಹರಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚಿಸಿದರು.

ಪ್ರಗತಿ ಪರಿಶೀಲನೆ
ಪ್ರಗತಿ ಪರಿಶೀಲನೆ

By

Published : Oct 6, 2020, 10:56 PM IST

ಶಿವಮೊಗ್ಗ:ಎಲ್ಲೆಡೆ ಪಸರಿಸುತ್ತಿರುವ ಕೊರೊನಾ ಸೋಂಕಿನ ನಿಯಂತ್ರಣದೊಂದಿಗೆ ವಿವಿಧ ಇಲಾಖೆಗಳ ಅನೇಕ ಯೋಜನೆಗಳ ಅನುಷ್ಠಾನ ಕಾರ್ಯ ನಿರಂತರವಾಗಿದ್ದರೂ ನಿರೀಕ್ಷಿತ ಪ್ರಗತಿ ಸಾಧಿಸುವುದು ಸಾಧ್ಯವಾಗಿಲ್ಲ. ಆದ್ದರಿಂದ ಮೊದಲಿನಂತೆ ಎಲ್ಲಾ ಯೋಜನೆಗಳ ಅನುಷ್ಠಾನ ಮತ್ತು ಅನುಪಾಲನಾ ಕಾರ್ಯ ಸಕ್ರಿಯವಾಗಿ, ನಿಗಧಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಲ್ಲಿ ಎಲ್ಲಾ ಇಲಾಖೆಗಳ ಕಂದಾಯಾಧಿಕಾರಿಗಳು ಹಾಗೂ ಸಿಬ್ಬಂದಿ ವಿಶೇಷ ಗಮನಹರಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೇಳಿದರು.

ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಎಲ್ಲಾ ತಾಲ್ಲೂಕುಗಳ ಕಂದಾಯಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಜಿಲ್ಲೆಯ ಅನೇಕ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಲಾಗಿದ್ದು, ಮತ್ತೆ ಕೆಲವು ಪ್ರದೇಶಗಳಲ್ಲಿ ನಿವೇಶನದ ಸಮಸ್ಯೆಗಳಿರುವುದನ್ನು ಗಮನಿಸಲಾಗಿದೆ. ಈ ಸಂದರ್ಭದಲ್ಲಿ ನೆರೆಯ ಕೆಲವು ಗ್ರಾಮಗಳನ್ನು ಒಟ್ಟುಗೂಡಿಸಿಕೊಂಡು ಘಟಕಗಳನ್ನು ಸ್ಥಾಪಿಸುವ ಬಗ್ಗೆ ಮುಂದಿನ ಒಂದು ವಾರದೊಳಗಾಗಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ತಹಶೀಲ್ದಾರರಿಗೆ ಸಲಹೆ ನೀಡಿದರು.

ಅಲ್ಲದೇ ಕೆಲವು ಗ್ರಾಮಗಳಲ್ಲಿ ಸ್ಮಶಾನಭೂಮಿ ಇಲ್ಲದಿರುವುದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಅಂತಹ ಗ್ರಾಮಗಳಲ್ಲಿ ಸರ್ಕಾರಿ ಭೂಮಿ ಇದ್ದಲ್ಲಿ ಗುರುತಿಸುವುದು ಅಥವಾ ಖಾಸಗಿ ವ್ಯಕ್ತಿಗಳು ಇಲಾಖೆಗೆ ಭೂಮಿ ಪರಭಾರೆ ಮಾಡುವವರಿದ್ದಲ್ಲಿಯೂ ವಿಚಾರಿಸಿ, ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮಾಹಿತಿ ನೀಡಬೇಕು. ಈ ಬಗ್ಗೆ ಎಲ್ಲಾ ತಹಶೀಲ್ದಾರರು ಗಮನಹರಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಸೋಂಕಿತರ ತಪಾಸಣೆ ಮತ್ತು ಚಿಕಿತ್ಸಾ ಕ್ರಮ ಅಡ್ಡಿ ಆತಂಕಗಳಿಲ್ಲದೆ ಮುಂದುವರೆಯುತ್ತಿರುವುದಕ್ಕೆ ಶ್ರಮಿಸುತ್ತಿರುವ ಸಂಬಂಧಿತ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದ ಅವರು, ಸಾರ್ವಜನಿಕರು ಸೋಂಕು ತಗುಲದಂತೆ ಸರ್ಕಾರ ಸೂಚಿಸಿರುವ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ವಿಶೇಷವಾಗಿ ಮಾರುಕಟ್ಟೆಯಂತಹ ಪ್ರದೇಶದಲ್ಲಿ ಸೋಂಕಿತರು ತಮ್ಮ ವೈಯಕ್ತಿಕ ಅನುಕೂಲಕ್ಕಾಗಿ ಸೋಂಕು ಹರಡುವುದು ತರವಲ್ಲ. ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದು ಅನಿವಾರ್ಯವಾಗಲಿದೆ ಎಂದರು.

ಕೋವಿಡ್‍ಗೆ ಸಂಬಂಧಿಸಿದಂತ ದೈನಂದಿನ ಮಾಹಿತಿಗಳನ್ನು ನಿಗಧಿತ ಆ್ಯಪ್‍ನಲ್ಲಿ ಅಪ್‍ಡೇಟ್ ಮಾಡುವಂತೆ ಹಾಗೂ ಹೋಂ ಕ್ವಾರಂಟೈನ್‍ನಲ್ಲಿರುವ ಸೋಂಕಿತರ ಭೇಟಿ ಕಾರ್ಯ, ಪ್ರಾಥಮಿಕ ಸಂಪರ್ಕ ಹೊಂದಿರುವವರ ಮಾಹಿತಿ ಉನ್ನತೀಕರಿಸುವ ಕಾರ್ಯ ನಿರೀಕ್ಷೆಯಂತಾಗಿಲ್ಲ. ನಿಯೋಜಿತ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೆ ತ್ವರಿತಗತಿಯಲ್ಲಿ ಭೇಟಿ ಕಾರ್ಯ ಪೂರ್ಣಗೊಳಿಸಿ ವರದಿ ನೀಡುವಂತೆ ಸೂಚಿಸಿದರು. ಸಾರ್ವಜನಿಕರು ಮಾಸ್ಕ್ ಹಾಕದಿರುವವರಿಗೆ ದಂಡ ಹಾಕುವಲ್ಲಿ ಸ್ಥಳೀಯ ಸಂಸ್ಥೆಗಳು ಸಕ್ರಿಯವಾಗಿವೆ. ಈಗಾಗಲೇ ಕೊರೊನಾ ನಿಯಂತ್ರಣಕ್ಕಾಗಿ ಬಿಡುಗಡೆಯಾಗಿರುವ ಅನುದಾನ, ಬಳಕೆ, ಬೇಡಿಕೆ ಮುಂತಾದವುಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು.

ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತಹ ಮಾಹಿತಿಯನ್ನು ಕೂಡಲೇ ಗಣಕೀಕರಣಗೊಳಿಸಿ ಮಾಹಿತಿ ಒದಗಿಸುವಂತೆ ತಹಶೀಲ್ದಾರರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಾದ್ಯಂತ ಶೇ.88ರಷ್ಟು ಬೆಳೆ ಸಮೀಕ್ಷೆ ನಡೆದಿದೆ. ಕೃಷಿಮ ಇಲಾಖೆ ಅಧಿಕಾರಿಗಳು ರೈತರೊಂದಿಗೆ ಚರ್ಚೆ ನಡೆಸಿ ತ್ವರಿತಗತಿಯಲ್ಲಿ ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಬೇಕು. ತಹಶೀಲ್ದಾರರು ಈ ಬಗ್ಗೆ ವಿಶೇಷ ಗಮನಹರಿಸುವಂತೆ ಸೂಚಿಸಿದರು.

ಕಳೆದೆರಡು ತಿಂಗಳಲ್ಲಿ ಆಗಿರುವ ಬೆಳೆ ನಷ್ಟದ ಕುರಿತು ಇಲಾಖೆಗಳು ನಿಗಧಿಪಡಿಸಿದ ದಿನಾಂಕದೊಳಗಾಗಿ ಬೆಳೆ ಪರಿಹಾರ ದಾಖಲೆಗಳನ್ನು ಒದಗಿಸುವಂತೆ ಹಾಗೂ ಕಳೆದ ಸಾಲಿನಲ್ಲಿ ಮಳೆಯಿಂದ ಮನೆ ಹಾನಿಗೊಳಗಾಗಿರುವ ಸಂತ್ರಸ್ಥರು ಮನೆ ಕಟ್ಟಿಕೊಳ್ಳುವ ಕಾರ್ಯ ಕೂಡಲೇ ಆರಂಭಿಸುವಂತೆ ನೊಟೀಸ್ ನೀಡಿ. ಪ್ರತಿಕ್ರಿಯಿಸದಿದ್ದಲ್ಲಿ ಮಾಹಿತಿ ನೀಡಿ ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ABOUT THE AUTHOR

...view details