ಶಿವಮೊಗ್ಗ:ಏಳನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಬೇಕೆಂಬ ನಿರ್ಣಯವನ್ನ ಸರ್ಕಾರ ಶಾಶ್ವತವಾಗಿ ಕೈಬಿಡಬೇಕೆಂದು ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಜೇಷನ್ ಆಫ್ ಇಂಡಿಯಾ(ಎಸ್ಐಒ)ಸಂಘಟನೆ ಆಗ್ರಹಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸ್ಥೆಯ ರಾಜ್ಯಾಧ್ಯಕ್ಷ ನಿಹಾದ್ ಹಿರಿಯೂರು, ಸರ್ಕಾರ ತರಾತುರಿಯಲ್ಲಿ ಏಳನೇ ತರಗತಿ ಪಬ್ಲಿಕ್ ಪರೀಕ್ಷೆ ಹೇರಲು ಹೊರಟಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಅವೈಜ್ಞಾನಿಕ ತೀರ್ಮಾನವನ್ನು ನಾವು ಖಂಡಿಸುತ್ತೇವೆ. ಸಚಿವರು ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಪಬ್ಲಿಕ್ ಪರೀಕ್ಷೆ ಜಾರಿಗೊಳಿಸಲಾಗುತ್ತದೆ ಎನ್ನುತ್ತಿದ್ದಾರೆ. ಆದರೆ, ಈ ಕ್ರಮ ಸರಿಯಲ್ಲ. ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಶಿಕ್ಷಕರೇ ಕೊರತೆಯಿಂದ ಪಾಠ ಪ್ರವಚನಗಳು ಸರಿಯಾಗಿ ನಡೆಯುತ್ತಿಲ್ಲ. ಕೆಲವು ಶಾಲೆಗಳಲ್ಲಿ ಮೂಲಸೌಕರ್ಯದ ಕೊರತೆಗಳಿದ್ದು, ಈ ಸಮಸ್ಯೆಗಳನ್ನು ಪರಿಹರಿಸದೇ ಪಬ್ಲಿಕ್ ಪರೀಕ್ಷೆ ಹೇಳಲು ಹೊರಟಿರುವ ಸರ್ಕಾರದ ಕ್ರಮ ಸರಿಯಲ್ಲ ಎಂದರು.