ಶಿವಮೊಗ್ಗ :ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದ್ವೀತಿಯ ಪಿಯುಸಿ ಮೌಲ್ಯಮಾಪನ ಕೇಂದ್ರಗಳನ್ನು ಜಿಲ್ಲಾ ಮಟ್ಟದಲ್ಲಿ ನಡೆಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾ ಮಟ್ಟದಲ್ಲಿ ದ್ವೀತಿಯ ಪಿಯು ಮೌಲ್ಯಮಾಪನ ಕೇಂದ್ರ ತೆರೆಯಲು ಮನವಿ
ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆ ದ್ವೀತಿಯ ಪಿಯುಸಿ ಮೌಲ್ಯಮಾಪನ ಕೇಂದ್ರಗಳನ್ನು ಪ್ರತಿ ಜಿಲ್ಲೆಗಳಲ್ಲಿ ನಡೆಸುವಂತೆ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ದ್ವೀತಿಯ ಪಿಯುಸಿ ಮೌಲ್ಯಮಾಪನ ಕೇಂದ್ರಗಳನ್ನು ಪ್ರತಿ ಜಿಲ್ಲೆಗಳಲ್ಲಿ ವಿಸ್ತರಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಸಚಿವರಿಗೆ ಮನವಿ ಮಾಡಲಾಯಿತು. ಮನವಿ ಸಂದರ್ಭದಲ್ಲಿ ಸಕಾರಾತ್ಮಕ ಸ್ಪಂದಿಸಿದ್ದ ಸರ್ಕಾರ, ಈಗ ತಾಂತ್ರಿಕ ಕಾರಣದ ನೇಪವೊಡ್ಡಿ ಮೌಲ್ಯಮಾಪನ ಪ್ರಕ್ರಿಯೆಯನ್ನು ವಿಕೇಂದ್ರಿಕೃತಗೊಳಿಸದೇ ಕೇಲವು ಜಿಲ್ಲೆಗಳಲ್ಲಿ ಮಾತ್ರ ಮೌಲ್ಯಮಾಪನ ಮಾಡಲಾಗುತ್ತಿದೆ ಎಂಬುದು ತಿಳಿದುಬಂದಿದೆ.
ಆಯಾ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನಕ್ಕೆ ಅವಕಾಶ ನೀಡಿ ಮೌಲ್ಯಮಾಪಕರಿಗೆ ಆಗುವ ಹೊರೆ ತಡೆಗಟ್ಟಬೇಕು. ಎರಡು ವರ್ಷಗಳ ಹಿಂದೆ ಇದ್ದ ಮೌಲ್ಯಮಾಪನ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಮನವಿ ಪತ್ರದಲ್ಲಿ ಕೋರಲಾಯಿತು.