ಶಿವಮೊಗ್ಗ: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಅಭಿಮಾನಿಗಳು ತಮ್ಮದೇ ರೀತಿಯಲ್ಲಿ ನಮನ ಸಲ್ಲಿಸುತ್ತಿದ್ದಾರೆ. ಹಾಗೆಯೇ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಅಪ್ಪು ಅವರ ಪುತ್ಥಳಿ ಪ್ರತಿಷ್ಠಾಪಿಸುವ ಮೂಲಕ ಅಭಿಮಾನ ಮೆರೆದಿದ್ದಾರೆ.
ಸಾಗರ ತಾಲೂಕಿನ ಆನಂದಪುರ ಸಮೀಪದ ಹೊಸಕೊಪ್ಪ ಗ್ರಾಮದ ಅಭಿಮಾನಿಗಳು ಸುಮಾರು 6 ಅಡಿ ಎತ್ತರದ ಕಟ್ಟೆಯ ಮೇಲೆ ಪುನೀತ್ ರಾಜ್ ಕುಮಾರ್ ಅವರ 3.5 ಅಡಿ ಎತ್ತರದ ಪುತ್ಥಳಿಯನ್ನು ಪ್ರತಿಷ್ಠಾಪಿಸಿ, ಗೌರವಿಸಿದ್ದಾರೆ.
ಅಪ್ಪು ಪುತ್ಥಳಿ ಪ್ರತಿಷ್ಠಾಪನೆ ಶಿವಮೊಗ್ಗದ ಮೊದಲ ಪುತ್ಥಳಿ:
ಹೊಸಕೊಪ್ಪದಲ್ಲಿ ಸ್ಥಾಪಿತವಾದ ಪುನೀತ್ ರಾಜ್ಕುಮಾರ್ ಅವರ ಪುತ್ಥಳಿಯು ಜಿಲ್ಲೆಯಲ್ಲಿ ಪ್ರತಿಷ್ಠಾಪನೆಗೊಂಡ ಮೊದಲ ಅಪ್ಪು ಪುತ್ಥಳಿಯಾಗಿದೆ. ಪುತ್ಥಳಿ ಸ್ಥಾಪಿಸಲು ಸುಮಾರು 1 ಲಕ್ಷ ರೂ. ಖರ್ಚು ಮಾಡಲಾಗಿದೆ. ಇದಕ್ಕೆ ಗ್ರಾಮಸ್ಥರೇ ದೇಣಿಗೆ ನೀಡಿರುವುದು ವಿಶೇಷ.
ಮಂಗಳವಾರ ಪುತ್ಥಳಿಯನ್ನು ಗ್ರಾಮದ ಎಲ್ಲಾ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನಂತರ ಗ್ರಾಮದ ಮುಖ್ಯ ದ್ವಾರದ ಬಳಿ ಪ್ರತಿಷ್ಠಾಪಿಸಲಾಯಿತು. ಈ ವೇಳೆ ಗ್ರಾಮಸ್ಥರು ಅನ್ನಸಂತರ್ಪಣೆ ಏರ್ಪಡಿಸಿದ್ದರು.
ಅಪ್ಪು ಪುತ್ಥಳಿ ಪ್ರತಿಷ್ಠಾಪನೆ (ಇದನ್ನೂ ಓದಿ: ಧೋನಿಯನ್ನು ಮೀರಿಸಿ 16 ಕೋಟಿ ರೂ. ಪಡೆದ ರವೀಂದ್ರ ಜಡೇಜಾ)