ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಪೋಕ್ಸೊ ನ್ಯಾಯಾಲಯ 20 ವರ್ಷಗಳ ಕಠಿಣ ಸಜೆ ಮತ್ತು 60 ಸಾವಿರ ರೂ.ದಂಡ ವಿಧಿಸಿದೆ. ಎಂ.ಎಚ್ ಮಕ್ಸೂದ್ (23) ಶಿಕ್ಷೆಗೆ ಒಳಗಾದ ವ್ಯಕ್ತಿ. 2021 ರ ಜೂನ್ 29 ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಸಜೆ, ₹60 ಸಾವಿರ ದಂಡ - Punishment for accused of sexually assaulting a minor
ಬಾಲಕಿ ಮೇಲೆ ಲೈಂಗಿನ ದೌರ್ಜನ್ಯ ಎಸಗಿದ್ದ ಅಪರಾಧಿಗೆ ನ್ಯಾಯಾಲಯ 20 ವರ್ಷ ಸೆರೆವಾಸ ಮತ್ತು 60 ಸಾವಿರ ದಂಡ ವಿಧಿಸಿದೆ.

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಶಿಕ್ಷೆ
ತೀರ್ಥಹಳ್ಳಿ ಸಿಪಿಐ ಪ್ರವೀಣ್ ನೀಲಮ್ಮನವರ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಧೀಶರಾದ ಮೋಹನ್ ಶಿಕ್ಷೆ ನೀಡಿದ್ದಾರೆ. ಒಂದು ವೇಳೆ ದಂಡ ತೆರಲು ತಪ್ಪಿದ್ದಲ್ಲಿ 6 ತಿಂಗಳು ಹೆಚ್ಚಿನ ಶಿಕ್ಷೆ ಅನುಭವಿಸಲು ಆದೇಶಿಸಿದ್ದಾರೆ. ಪ್ರಕರಣ ಸಂಬಂಧ ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಹರಿಪ್ರಸಾದ್ ವಾದ ಮಂಡಿಸಿದ್ದರು.
ಇದನ್ನೂ ಓದಿ:ಮಗಳ ಮೇಲೆ ಕಣ್ಣಾಕಿದ ಪ್ರಿಯಕರನ ಗುಪ್ತಾಂಗ ಕತ್ತರಿಸಿದ ಮಹಿಳೆ