ಕರ್ನಾಟಕ

karnataka

ETV Bharat / state

ಯಡಿಯೂರಪ್ಪ ಪ್ರಚಾರ ಯಾವುದೇ ಪರಿಣಾಮ ಬೀರಲ್ಲ: ಆರ್. ಪ್ರಸನ್ನ ಕುಮಾರ್ - ಶಿವಮೊಗ್ಗದಲ್ಲಿ ಕಾಂಗ್ರೆಸ್​ ಪಕ್ಷದಿಂದ ಸುದ್ದಿಗೋಷ್ಠಿ

ನಮ್ಮ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ದೇವೇಗೌಡರ ಭೇಟಿ ಯಾವುದೇ ಪರಿಣಾಮ ಉಂಟು ಮಾಡಲ್ಲ ಎಂದು ಪರಿಷತ್ ಅಭ್ಯರ್ಥಿ ಆರ್. ಪ್ರಸನ್ನ ಕುಮಾರ್ ತಿಳಿಸಿದ್ದಾರೆ.

congress pressmeet in shivamogga
ಶಿವಮೊಗ್ಗದಲ್ಲಿ ಕಾಂಗ್ರೆಸ್​ ಪಕ್ಷದಿಂದ ಸುದ್ದಿಗೋಷ್ಠಿ

By

Published : Dec 1, 2021, 5:25 PM IST

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ಶಿವಮೊಗ್ಗದಲ್ಲಿ ಪ್ರಚಾರ ನಡೆಸಿದ್ದರಿಂದ ನಮ್ಮ ಗೆಲುವಿಗೆ ಯಾವುದೇ ತಡೆ ಆಗುವುದಿಲ್ಲ ಎಂದು ಪರಿಷತ್ ಅಭ್ಯರ್ಥಿ ಆರ್. ಪ್ರಸನ್ನ ಕುಮಾರ್ ತಿಳಿಸಿದ್ದಾರೆ.

ಇಂದು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಷತ್ ಚುನಾವಣೆಯ ಪ್ರಚಾರವನ್ನು ಶಿವಮೊಗ್ಗ ಜಿಲ್ಲೆ ಸೇರಿದಂತೆ ದಾವಣಗೆರೆಯ ಚನ್ನಗಿರಿ, ಹೊನ್ನಾಳಿ, ನ್ಯಾಮತಿ ಹಾಗೂ ಮಾಯಕೊಂಡದ ಎರಡು ಜಿ.ಪಂ ಕ್ಷೇತ್ರದಲ್ಲಿ‌ ಮೊದಲ ಸುತ್ತಿನ ಪ್ರಚಾರ ನಡೆಸಿದ್ದೇನೆ ಎಂದರು.

ಪರಿಷತ್ ಅಭ್ಯರ್ಥಿ ಆರ್. ಪ್ರಸನ್ನ ಕುಮಾರ್ ಮಾತನಾಡಿದರು

ಪ್ರಚಾರದ ವೇಳೆ ಸ್ಥಳೀಯ ಪ್ರತಿನಿಧಿಗಳು ಸೇರಿದ್ದನ್ನು ನೋಡಿ, ಅವರ ಮಾತುಗಳನ್ನು ಕೇಳಿ ನನಗೆ ಗೆಲ್ಲುವ ಭರವಸೆ ಬಂದಿದೆ. ಇದು ಕಳೆದ ಆರು ವರ್ಷದ ಸಾಧನೆಯ ನಮ್ಮ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ಹೇಳಿದರು.

ಗ್ರಾ.ಪಂ ಸದಸ್ಯರ ಹಕ್ಕನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತೇನೆ. ಇನ್ನು ಒಂದೇ ಒಂದು ಆಶ್ರಯ ಮನೆ ನೀಡಿಲ್ಲ. ಗ್ರಾಮ ಪಂಚಾಯಿತಿ ಅಭಿವೃದ್ದಿಗೆ ಹಣ ಬಿಡುಗಡೆ ಆಗಿಲ್ಲ. ಪಂಚಾಯಿತಿ ಸದಸ್ಯರ ಸಮಸ್ಯೆ ಕೇಳುವವರೇ ಇಲ್ಲದಂತೆ ಆಗಿದೆ. ಪ್ರಚಾರದ ವೇಳೆ ನಮ್ಮ ನಿರೀಕ್ಷೆಗೂ ಮೀರಿ ಸದಸ್ಯರು ಸೇರುತ್ತಿದ್ದಾರೆ. ಇದು ನನ್ನ ಗೆಲುವಿನ ದಿಕ್ಸೂಚಿಯನ್ನು ತೋರುತ್ತಿದೆ ಎಂದರು.

ಜೆಡಿಎಸ್ ಬೆಂಬಲ ಕೋರಿದ್ದೇನೆ

ಜೆಡಿಎಸ್ ಪಕ್ಷದ ಅಧ್ಯಕ್ಷ ಶ್ರೀಕಾಂತ್, ಮಾಜಿ ಶಾಸಕಿ ಶಾರದ ಪೂರ್ಯಾನಾಯ್ಕ, ಭದ್ರಾವತಿಯ ಶಾರದಮ್ಮ ಅವರನ್ನು ಭೇಟಿಯಾಗಿ ಮಾತನಾಡಿದ್ದೇನೆ. ಅವರು ನಮಗೆ ಬೆಂಬಲ ಸೂಚಿಸಿದ್ದಾರೆ. ಸೊರಬದಲ್ಲಿ ಮಧು ಬಂಗಾರಪ್ಪ ಅವರು ಬಂದಿದ್ದರಿಂದ ಅಲ್ಲಿನ ಶೇ. 70 ರಷ್ಟು ಮತಗಳು ಬರಲಿವೆ.

ನಮ್ಮ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ದೇವೇಗೌಡರ ಭೇಟಿ ಯಾವುದೇ ಪರಿಣಾಮ ಉಂಟು ಮಾಡಲ್ಲ. ಹಸಿ ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು ಎಂದರು.

ಡಿಸೆಂಬರ್ 3 ರಂದು ಡಿಕೆಶಿ, ಸಿದ್ದರಾಮಯ್ಯ ಆಗಮನ

ಕೆಪಿಸಿಸಿ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಚಾರಕ್ಕಾಗಿ ಡಿಸೆಂಬರ್ 3 ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಅಂದು ಶಿವಮೊಗ್ಗದ ಸರ್ಜಿಕನ್ ವೆಕ್ಷನ್ ಹಾಲ್​ನಲ್ಲಿ ಸಭೆ ನಡೆಸಲಿದ್ದಾರೆ ಎಂದರು.

ಪರಿಷತ್ ಚುನಾವಣೆಯ ಪ್ರಚಾರವನ್ನು ನಮ್ಮ ಪಕ್ಷದ ಅಭ್ಯರ್ಥಿ ಸೇರಿದಂತೆ ಎಲ್ಲ ನಾಯಕರು ಮೊದಲ ಸುತ್ತಿನ ಪ್ರಚಾರ ನಡೆಸಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಚುನಾವಣೆ ಇದೆ. ಸ್ಥಳೀಯ ಸಂಸ್ಥೆಯಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ಇಲ್ಲಿ ನಮ್ಮ ಬೆಂಬಲಿಗರು ಇದ್ದಾರೆ. ಇದರಿಂದ ನಮ್ಮ ಗೆಲುವು ಸುಲಭವಾಗಲಿದೆ. ನಮ್ಮ ಅಭ್ಯರ್ಥಿ ನೂರಕ್ಕೂ ನೂರು ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಓದಿ:ಸಿದ್ದರಾಮಯ್ಯ ರಾಜಕೀಯ ಸ್ಥಿರತೆ ಉಳಿಸಿಕೊಳ್ಳಲು ಜಿಟಿಡಿ ಸ್ನೇಹ : ಸಚಿವ ಈಶ್ವರಪ್ಪ ವ್ಯಂಗ್ಯ

ABOUT THE AUTHOR

...view details