ಕರ್ನಾಟಕ

karnataka

By

Published : Feb 10, 2020, 4:45 PM IST

ETV Bharat / state

ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ: 400 ಕೆ.ಜಿ ಪ್ಲಾಸ್ಟಿಕ್ ವಶ

ಶಿವಮೊಗ್ಗದಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪಾಲಿಕೆಯ ಅಧಿಕಾರಿಗಳು ದಾಳಿ ಮಾಡಿ, ಪ್ಲಾಸ್ಟಿಕ್​​ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

400 ಕೆ.ಜಿ ಪ್ಲಾಸ್ಟಿಕ್ ವಶ
400 ಕೆ.ಜಿ ಪ್ಲಾಸ್ಟಿಕ್ ವಶ

ಶಿವಮೊಗ್ಗ: ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪಾಲಿಕೆಯ ಅಧಿಕಾರಿಗಳು ದಾಳಿ ನಡೆಸಿ, ಸುಮಾರು‌ 400 ಕೆ.ಜಿ. ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

400 ಕೆ.ಜಿಯಷ್ಟು ಪ್ಲಾಸ್ಟಿಕ್ ವಶಪಡಿಸಿಕೊಂಡ ಅಧಿಕಾರಿಗಳು

ನಗರದ ವಾಣಿಜ್ಯ ಕೇಂದ್ರ ಗಾಂಧಿ ಬಜಾರ್​ನಲ್ಲಿನ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಕವರ್ ಹೀಗೆ ಹಲವು ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಸ್ವಚ್ಛ ಭಾರತ ಯೋಜನೆಯಡಿ ಪ್ಲಾಸ್ಟಿಕ್ ನಿಷೇಧ ಮಾಡಿದ್ದರು ಸಹ ಅನೇಕ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿ, ಸುಮಾರು‌ 400 ಕೆ.ಜಿ. ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ABOUT THE AUTHOR

...view details