ಶಿವಮೊಗ್ಗ: ಸತತ ನಾಲ್ಕು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಮಲೆನಾಡಿಗರ ಜೀವನ ಅಸ್ತವ್ಯಸ್ತವಾಗಿದ್ದು, ಜಿಲ್ಲೆಯಲ್ಲಿನ ಕೆಲ ಪ್ರದೇಶಗಳಲ್ಲಿ ನೆರೆ ಆತಂಕ ಎದುರಾಗಿದೆ.
ಮಲೆನಾಡಿನಲ್ಲಿ ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ - ಶಿವಮೊಗ್ಗ ಜಿಲ್ಲೆಯಾದ್ಯಂತ ವರುಣನ ಅಬ್ಬರ
ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಬಿರುಸಿನ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿನ ಜಲಾಶಯಗಳ ನೀರಿನ ಮಟ್ಟದಲ್ಲಿ ಏರಿಕೆ ಕಂಡಿದೆ. ಹಲವಾರು ಹಳ್ಳಿಗಳಲ್ಲಿ ಮರಗಳು ನೆಲಕ್ಕರುಳಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ.
ಮಳೆಯ ಆರ್ಭಟ
ಹೊಸನಗರ, ತೀರ್ಥಹಳ್ಳಿ, ಸಾಗರ ತಾಲೂಕುಗಳಲ್ಲಿ ಹಳ್ಳ-ಕೊಳ್ಳಗಳು ತುಂಬಿದ ಪರಿಣಾಮ ರಸ್ತೆಗಳೆಲ್ಲಾ ನೀರು ಪಾಲಾಗಿ ಸಂಚಾರ ಸೇರಿದಂತೆ ಜನಜೀವನಕ್ಕೆ ತೊಂದರೆಯಾಗಿದೆ.
ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ಹಾಗೂ ದಟ್ಟ ಕಾಡಿನ ಪ್ರದೇಶದಲ್ಲಿ ನೂರಾರು ಮರಗಳು ಉರುಳಿಬಿದ್ದಿವೆ. ಪರಿಣಾಮ, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶಿವಮೊಗ್ಗ ನಗರದಲ್ಲಿಯೂ ವರ್ಷಧಾರೆ ಮುಂದುವರಿದಿದ್ದು, ನೆರೆಯ ಆತಂಕದಲ್ಲಿ ಜನರಿದ್ದಾರೆ.