ಶಿವಮೊಗ್ಗ/ಹುಬ್ಬಳ್ಳಿ:ಶಿವಮೊಗ್ಗದಲ್ಲಿ ಗುಡುಗು, ಗಾಳಿ ಸಹಿತ ಧಾರಾಕಾರ ಮಳೆ ಸುರಿದಿದೆ. ಮಳೆಯಿಂದಾಗಿ ನಗರಾದ್ಯಂತ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದೇ ರೀತಿ ಗಾಳಿ ಮಳೆ ಮುಂದುವರಿದಲ್ಲಿ ಮರಗಳು ಧರೆಗುರುಳುವ ಸಾಧ್ಯತೆ ಹೆಚ್ಚಾಗಿದೆ.
ಶಿವಮೊಗ್ಗ, ಹುಬ್ಬಳ್ಳಿಯಲ್ಲಿ ಭಾರಿ ಮಳೆ: ಬಿಸಿಲಿನ ತಾಪಕ್ಕೆ ಕಂಗೆಟ್ಟಿದ್ದ ಜನರಿಗೆ ತಂಪೆರೆದ ಮೇಘರಾಜ - ಮಳೆ
ಶಿವಮೊಗ್ಗ ಹಾಗೂ ಹುಬ್ಬಳ್ಳಿಯಲ್ಲಿ ಭಾರಿ ಮಳೆಯಾಗಿದೆ. ಶಿವಮೊಗ್ಗದಲ್ಲಿ ಗುಡುಗು, ಗಾಳಿ ಸಹಿತ ಧಾರಾಕಾರ ಮಳೆ ಸುರಿದರೆ, ಹುಬ್ಬಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ
ಶಿವಮೊಗ್ಗ,ಹುಬ್ಬಳ್ಳಿಯಲ್ಲಿ ಬಾರಿ ಮಳೆ
ಇತ್ತ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಬಿಸಿಲಿನ ತಾಪಕ್ಕೆ ಕಂಗೆಟ್ಟಿದ್ದ ಜನರಿಗೆ ಮೇಘರಾಜ ತಂಪೆರೆದಿದ್ದಾನೆ. ಕೊರೊನಾ ಕರ್ಫ್ಯೂ ಜಾರಿ ಮಾಡಲಾಗಿದ್ದು, ಜನರು ಹೊರ ಬರದಂತೆ ಮಳೆರಾಯ ಸಾಥ್ ನೀಡಿದಂತಾಗಿದೆ.
ಅರ್ಧ ಗಂಟೆಗೂ ಅಧಿಕ ಕಾಲ ಸುರಿದ ಮಳೆಯಿಂದ ವಾಣಿಜ್ಯನಗರಿ ಕೂಲ್ ಕೂಲ್ ಆಗಿದೆ.