ಶಿವಮೊಗ್ಗ:ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 14 ವರ್ಷಗಳ ಕಾಲ ಕಠಿಣ ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಗೆ 14 ವರ್ಷ ಕಠಿಣ ಶಿಕ್ಷೆ - ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು
ಶಿವಮೊಗ್ಗ ಜಿಲ್ಲೆಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯ 14 ವರ್ಷಗಳ ಕಾಲ ಕಠಿಣ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಈ ಕುರಿತು 'ಈಟಿವಿ ಭಾರತ'ದೊಂದಿಗೆ ಮಾತನಾಡಿದ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ಸರ್ಕಾರಿ ಅಭಿಯೋಜಕ ಸತೀಶ್ ಕೆ.ಎಸ್, 2016 ರಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ನಂತರ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ನ್ಯಾಯಾಲಯವು ಸುಧೀರ್ಘ ವಿಚಾರಣೆ ನಡೆಸಿ ಸೆ.30 ರಂದು ಆರೋಪಿ ಶಿವಕುಮಾರ್ಗೆ ಶಿಕ್ಷೆ ವಿಧಿಸಿದ್ದು, ನಂತರ ಶಿಕ್ಷೆಯ ಪ್ರಮಾಣವನ್ನು ಅ.6 ರಂದು 14 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಇಪ್ಪತ್ತೈದು ಸಾವಿರ ರೂಪಾಯಿ ದಂಡ ವಿಧಿಸಿದೆ ಎಂದು ಮಾಹಿತಿ ನೀಡಿದರು.
ಮಕ್ಕಳ ಸಂರಕ್ಷಣೆಗೆ ಸ್ಥಾಪಿತಗೊಂಡ ನ್ಯಾಯಾಲಯವು ನೀಡಿರುವ ಈ ತೀರ್ಪು ಸಮಾಜಕ್ಕೆ ಉತ್ತಮ ಸಂದೇಶವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳನ್ನು ತಡೆಯಲು ಜನರಲ್ಲಿ ಎಚ್ಚರಿಕೆಯ ಗಂಟೆ ಆಗಿದೆ ಹಾಗೂ ನೊಂದವರಿಗೆ ಈ ಆದೇಶ ಸಮಾಧಾನ ತಂದಿದೆ ಎಂದು ಸರ್ಕಾರಿ ಅಭಿಯೋಜಕರು ಹೇಳಿದರು.