ಶಿವಮೊಗ್ಗ: ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಜಾರಿಗೆ ತರುವ ನೀತಿ, ನಿಯಮ, ಕಾನೂನುಗಳನ್ನು ಜನತೆಗೆ ಮುಟ್ಟಿಸುವಲ್ಲಿ ಕೊರೊನಾ ವಾರಿಯರ್ಸ್ ಪಾತ್ರ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರೆಡ್ ಕ್ರಾಸ್ನ 28 ಮಂದಿಯನ್ನು ಕೊರೊನಾ ವಾರಿಯರ್ಸ್ ಆಗಿ ನೇಮಿಸಿದೆ. ಇವರಿಗೆ ಜಿಲ್ಲಾಡಳಿತ ಕೆಲವು ನಿರ್ದೇಶನಗಳನ್ನು ನೀಡಿದೆ. ಅದರಂತೆ ವಾರಿಯರ್ಸ್ ಕಾರ್ಯನಿರ್ವಹಿಸುತ್ತಿದ್ದಾರೆ.
ಶಿವಮೊಗ್ಗದಲ್ಲಿ ರೆಡ್ ಕ್ರಾಸ್ನ 28 ಮಂದಿ ಕೊರೊನಾ ವಾರಿಯರ್ಸ್: ಇವರ ಕಾರ್ಯಕ್ಕೆ ಡಿಸಿ ಮೆಚ್ಚುಗೆ
ಶಿವಮೊಗ್ಗದಲ್ಲಿ ಜಿಲ್ಲಾಡಳಿತ ರೆಡ್ ಕ್ರಾಸ್ನ 28 ಮಂದಿಯನ್ನು ಕೊರೊನಾ ವಾರಿಯರ್ಸ್ ಮಾಡಿದೆ. ಇವರಿಗೆ ಕೆಲವು ನಿರ್ದೇಶನಗಳನ್ನು ನೀಡಿದ್ದು, ಅದರಂತೆ ಕಾರ್ಯನಿರ್ವಹಿಸುತ್ತಿದ್ದಾರೆ.
ನಗರದಲ್ಲಿ 28 ಕೊರೊನಾ ವಾರಿಯರ್ಸ್ ಗುರುತಿಸಲಾಗಿದೆ. ಇವರಿಗೆ ಜನರೊಂದಿಗೆ ಹೇಗೆ ವರ್ತಿಸಬೇಕು, ಒಂದು ವೇಳೆ ಸೀಲ್ ಡೌನ್ ಮಾಡಿದ್ದರೆ ಹೇಗೆ ಜಿಲ್ಲಾಡಳಿತಕ್ಕೆ, ಅಧಿಕಾರಿಗಳಿಗೆ, ಜನರಿಗೆ ಸಹಾಯ ಮಾಡಬಹುದು ಎಂಬುದನ್ನು ತಿಳಿಸಿಕೊಡಲಾಗಿದೆ. ಇದಕ್ಕಾಗಿ ಜಿಲ್ಲಾಧಿಕಾರಿಗಳು ಸರಣಿ ಸಭೆಗಳನ್ನು ನಡೆಸಿದ್ದಾರೆ. ವಾರಿಯರ್ಸ್ ಆಗಿ ಬರುವವರು ತಮ್ಮ ಆರೋಗ್ಯದ ಜೊತೆಗೆ ಜನರ ಆರೋಗ್ಯವನ್ನು ಸಹ ಕಾಪಾಡಿಕೊಳ್ಳುವುದರ ಬಗ್ಗೆ ಜಾಗೃತಿ ಮೂಡಿಸಬೇಕು. ಕೊರೊನಾ ವಾರಿಯರ್ಸ್ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸಹಾಯ ಮಾಡುವುದು, ಅವಶ್ಯಕವಿದ್ದವರಿಗೆ ಔಷಧ ತಲುಪಿಸುವ ಕಾರ್ಯವನ್ನು ಸಹ ಮಾಡುತ್ತಿದ್ದಾರೆ.
ರೆಡ್ ಕ್ರಾಸ್ ವಾರಿಯರ್ಸ್ ಈ ಹಿಂದೆಯೂ ತುರ್ತು ಸಂದರ್ಭದಲ್ಲಿ ಜನರನ್ನು ರಕ್ಷಿಸುವ ಕಾರ್ಯವನ್ನು ಮಾಡಿದ್ದಾರೆ. ಅಲ್ಲದೆ ಕೊರೊನಾ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸಾಕಷ್ಟು ಶ್ರಮ ವಹಿಸಿದ್ದಾರೆ. ಇವರಿಗೆ ಜಿಲ್ಲಾಧಿಕಾರಿಗಳು ಮೆಚ್ಚುಗೆ ವ್ಯಕ್ತಡಿಸಿದ್ದಾರೆ.