ಶಿವಮೊಗ್ಗ: ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲಕಿರುವ ವಲಸೆ ಕೂಲಿ ಕಾರ್ಮಿಕರನ್ನು ಅವರ ಊರುಗಳಿಗೆ ಹಿಂತಿರುಗಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಪೀಸ್ ಆರ್ಗನೈಸೇಶನ್ ಮಹಿಳಾ ವಿಭಾಗದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ತಲುಪಿಸುವಂತೆ ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ - Shimoga Peace Organization
ಲಾಕ್ಡೌನ್ ಹಿನ್ನೆಲೆ ದೇಶಾದ್ಯಂತ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತಲುಪಲು ಸೂಕ್ತ ವ್ಯವಸ್ಥೆ ಇಲ್ಲದೇ ನೂರಾರು ಕಿ.ಮೀ ಕಾಲ್ನಡಿಗೆಯಲ್ಲಿಯೇ ಸಾಗುತ್ತಿದ್ದಾರೆ. ಈ ನಡುವೆ ಹಲವು ಕಾರ್ಮಿಕರ ಸಾವು ಸಹ ಸಂಭವಿಸಿದೆ. ಈ ಹಿನ್ನೆಲೆ ಅವರೆಲ್ಲರನ್ನು ಸುರಕ್ಷಿತವಾಗಿ ಊರುಗಳಿಗೆ ತಲುಪಿಸುವಂತೆ ಮನವಿ ಮಾಡಲಾಯಿತು.
ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ತಲುಪಿಸುವಂತೆ ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ದೇಶಾದ್ಯಂತ ವಲಸೆ ಕೂಲಿ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತಲುಪಲು ಸೂಕ್ತ ವ್ಯವಸ್ಥೆ ಇಲ್ಲದೇ ನೂರಾರು ಕಿ.ಮೀ ಕಾಲ್ನಡಿಗೆಯಲ್ಲಿಯೇ ಸಾಗುವ ಸಂದರ್ಭದಲ್ಲಿ ಕೆಲವೆಡೆ ಕಾರ್ಮಿಕರು ಮೃತಪಟ್ಟಿದ್ದಾರೆ.
ಹಾಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ಅವರ ಸ್ವಂತ ಊರುಗಳಿಗೆ ಕಳುಹಿಸಿಕೊಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.