ಶಿವಮೊಗ್ಗ:ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಪೊಲೀಸರ ಗೋಲಿಬಾರ್ಗೆ ಮೃತಪಟ್ಟ ಕುಟುಂಬಗಳಿಗೆ ಶೀಘ್ರವೇ ಪರಿಹಾರ ನೀಡಬೇಕು. ಗೋಲಿಬಾರ್ ನಡೆಸಿದ ಪೊಲೀಸ್ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸಿಟಿಜನ್ ಯುನೈಟೆಡ್ ಮೂಮೆಂಟ್ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.
ಗೋಲಿಬಾರ್ನಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡಲು ಆಗ್ರಹ.. - ಪೌರತ್ವ ಮಸೂದೆ ತಿದ್ದುಪಡಿ
ಮಂಗಳೂರಿನ ಪ್ರತಿಭಟನೆ ವೇಳೆ ಪೊಲೀಸರ ಗುಂಡಿಗೆ ಬಲಿಯಾದ ಕುಟುಂಬಗಳಿಗೆ ಸರ್ಕಾರ ಕೂಡಲೇ ಪರಿಹಾರ ನೀಡಬೇಕು. ಗೋಲಿಬಾರ್ ಮಾಡಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಟಿಜನ್ ಯುನೈಟೆಡ್ ಮೂಮೆಂಟ್ ಸಂಘಟನೆ ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಮನವಿ ಸಲ್ಲಿಸಿದ್ದಾರೆ.
ಗೋಲಿಬಾರ್ನಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ
ಪೌರತ್ವ ತಿದ್ದುಪಡಿ ಕಾಯ್ದೆ ಧರ್ಮದ ಆಧಾರದ ಮೇಲೆ ಜನರನ್ನು ಇಬ್ಭಾಗ ಮಾಡುತ್ತಿದೆ. ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಧರ್ಮದ ಆಧಾರದ ಮೇಲೆ ಕಾನೂನು ರಚಿಸಲಾಗುತ್ತಿರುವುದು ಸಂವಿಧಾನದ ಅನುಚ್ಛೇದ 14, 12 ಮತ್ತು ಸಂವಿಧಾನದ ಪ್ರಿಯಾಂಬಲ್ ವಿರುದ್ಧವಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.