ಶಿವಮೊಗ್ಗ: ಪಿಎಫ್ಐ ನಿಷೇಧದ ಹಿನ್ನೆಲೆ ಜಿಲ್ಲೆಯಾದ್ಯಂತ ಕಂದಾಯ ಹಾಗೂ ಪೊಲೀಸ್ ಅಧಿಕಾರಿಗಳು ಪಿಎಫ್ಐ ಕಾರ್ಯಕರ್ತರ ಮನೆ ಮೇಲೆ ತಡ ರಾತ್ರಿ ದಾಳಿ ನಡೆಸಿದ್ದಾರೆ.
ಜಿಲ್ಲೆಯಾದ್ಯಂತ ಅಧಿಕಾರಿಗಳು ಸರ್ಚ್ ವಾರೆಂಟ್ ಹಿಡಿದು ಕಾರ್ಯಕರ್ತರ ಮನೆ ಮೇಲೆ ದಾಳಿ ನಡೆಸಿದ್ದು, ಶಿವಮೊಗ್ಗದ ಗಾಂಧಿ ಬಜಾರ್ನ ಪಿಎಫ್ಐ ಕಾರ್ಯಕರ್ತ ಉಮರ್ ಫಾರೂಕ್ ಮನೆಗೆ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿ ಮನೆಗೆ ಬೀಗ ಹಾಕಿದ್ದಾರೆ. ನಗರದ ಬೈಪಾಸ್ ರಸ್ತೆಯ ಎಸ್ಡಿಪಿಐ ಕಚೇರಿ ಹಾಗು ಟಿಪ್ಪು ನಗರದ ಎಸ್ಡಿಪಿಐ ಮಾಜಿ ಜಿಲ್ಲಾಧ್ಯಕ್ಷ ಸಲೀಂ ಖಾನ್ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.