ಶಿವಮೊಗ್ಗ:ಇಡೀ ದೇಶವೇ ಕೊರೊನಾ ವಿರುದ್ಧ ಹೋರಾಟ ಮಾಡುತ್ತಿದ್ದರೆ, ಬಿಜೆಪಿ ಪಕ್ಷದ ನಾಯಕರು ಅಧಿಕಾರಕ್ಕಾಗಿ, ಮಂತ್ರಿಗಿರಿಗಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ತಿಳಿಸಿದರು.
ಅಧಿಕಾರಕ್ಕಾಗಿ ಕಚ್ಚಾಟ ಮಾಡುತ್ತಿರುವುದು ರಾಜ್ಯದ ದುರಂತ: ಬಿಜೆಪಿ ವಿರುದ್ಧ ಸಲೀಂ ಅಹಮದ್ ಕಿಡಿ
ಕೊರೊನಾ ವಿರುದ್ಧದ ಹೋರಾಟದ ನಡುವೆಯೂ ಬಿಜೆಪಿ ಪಕ್ಷದ ನಾಯಕರು ಮಂತ್ರಿಗಿರಿಗಾಗಿ, ಅಧಿಕಾರಕ್ಕಾಗಿ ಕಚ್ಚಾಟ ಮಾಡುತ್ತಿರುವುದು ರಾಜ್ಯದ ದುರಂತ. ಪಿಪಿಇ ಕಿಟ್, ಸ್ಯಾನಿಟೈಸರ್ ಕಿಟ್, ವೆಂಟಿಲೇಟರ್ಗಳಲ್ಲಿ ಭ್ರಷ್ಟಾಚಾರ ನಡೆದಿದ್ದು, ಇದರಲ್ಲಿ ಸರ್ಕಾರದ ಅಧಿಕಾರಿಗಳು ಹಾಗೂ ಮುಖಂಡರು ಭಾಗಿಯಾಗಿ ಕಮೀಷನ್ ದಂಧೆಗೆ ಇಳಿದಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಆರೋಪಿಸಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಲೀಂ ಅಹಮದ್, ಈ ಕೊರೊನಾ ವಿರುದ್ಧದ ಹೋರಾಟದ ನಡುವೆಯೂ ಬಿಜೆಪಿ ಪಕ್ಷದ ನಾಯಕರು ಮಂತ್ರಿಗಿರಿಗಾಗಿ, ಅಧಿಕಾರಕ್ಕಾಗಿ ಕಚ್ಚಾಟ ಮಾಡುತ್ತಿರುವುದು ರಾಜ್ಯದ ದುರಂತ. ಪಿಪಿಇ ಕಿಟ್, ಸ್ಯಾನಿಟೈಸರ್ ಕಿಟ್, ವೆಂಟಿಲೇಟರ್ಗಳಲ್ಲಿ ಭ್ರಷ್ಟಾಚಾರ ನಡೆದಿದ್ದು, ಇದರಲ್ಲಿ ಸರ್ಕಾರದ ಅಧಿಕಾರಿಗಳು ಹಾಗೂ ಮುಖಂಡರು ಭಾಗಿಯಾಗಿ ಕಮಿಷನ್ ದಂಧೆಗೆ ಇಳಿದಿದ್ದಾರೆ ಎಂದು ಆರೋಪಿಸಿದರು. ಕೊರೊನಾ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರಕ್ಕೆ ಎಲ್ಲ ರೀತಿಯ ಬೆಂಬಲ ನೀಡಿದ್ದೇವೆ ಆದರೂ ರಾಜ್ಯ ಸರ್ಕಾರ ಕೊರೊನಾ ತಡೆಗಟ್ಟುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಕೆಪಿಸಿಸಿ ಎಐಸಿಸಿ ಕಾರ್ಯದರ್ಶಿ ಮಂಜುನಾಥ್ ಭಂಡಾರಿ, ಜಿಲ್ಲಾಧ್ಯಕ್ಷ ಹೆಚ್.ಎಸ್ ಸುಂದ್ರೇಶ್, ಮಾಜಿ ಶಾಸಕ ಪ್ರಸನ್ನ ಕುಮಾರ್, ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನ ಕುಮಾರ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.