ಶಿವಮೊಗ್ಗ: ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆತಂಕದ ವಾತಾವರಣ ನಿರ್ಮಾಣವಾಗುತ್ತಿದೆ. ಹಾಗಾಗಿ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಗೂ ಸ್ಯಾನಿಟೈಸರ್ ಸಿಂಪಡಣೆ - Sanitisation to Shimoga District office
ಕೊರೊನಾ ಭೀತಿ ಹಿನ್ನೆಲೆ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಯಿತು.
![ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಗೂ ಸ್ಯಾನಿಟೈಸರ್ ಸಿಂಪಡಣೆ ಸ್ಯಾನಿಟೈಜರ್ ಸಿಂಪಡಣೆ](https://etvbharatimages.akamaized.net/etvbharat/prod-images/768-512-7360045-1023-7360045-1590516786592.jpg)
ಸ್ಯಾನಿಟೈಜರ್ ಸಿಂಪಡಣೆ
ಸ್ಯಾನಿಟೈಸರ್ ಸಿಂಪಡಣೆ
ಕೊರೊನಾ ವೈರಸ್ ನಿಯಂತ್ರಣ ಕ್ರಮಗಳನ್ವಯ ಇಂದು ಜಿಲ್ಲಾಧಿಕಾರಿ ಕಚೇರಿ ಆವರಣ ಮತ್ತು ಕಟ್ಟಡಕ್ಕೆ ಅಗ್ನಿಶಾಮಕ ಸಿಬ್ಬಂದಿ ಸ್ಯಾನಿಟೈಸರ್ ಸಿಂಪಡನೆ ಮಾಡಿದರು.
ನಿತ್ಯ ನೂರಾರು ಜನ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸುತ್ತಿರುತ್ತಾರೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಯಿತು.