ಶಿವಮೊಗ್ಗ:2019-20ನೇ ಸಾಲಿನ ಎಸ್ಬಿಎಮ್ ಯೋಜನೆಯಡಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಆಯೋಜಿಸಲಾದ ಸ್ವಚ್ಛ ಮೇವ ಜಯತೆ ಯೋಜನೆ ಅನುಷ್ಠಾನದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯ ಗ್ರಾ.ಪಂ.ಗಳಲ್ಲಿ ಆಯೋಜಿಸಲಾದ ಸ್ವಚ್ಛ ಮೇವ ಜಯತೆ ಕಾರ್ಯಕ್ರಮ ಅನುಷ್ಠಾನದಲ್ಲಿ ಸುಮಾರು 23 ಲಕ್ಷ ರೂ.ಯಷ್ಟು ಅವ್ಯವಹಾರ ನಡೆದಿದೆ. ಈ ಹಿಂದೆ ಅನುಷ್ಠಾನದಲ್ಲಿದ್ದ ಗೋಬರ್ ಗ್ಯಾಸ್ ಸ್ಥಾವರ ಅಳವಡಿಕೆಯಲ್ಲೂ ಅಕ್ರಮ ನಡೆದಿರಬಹುದು. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆರ್. ಪ್ರಸನ್ನ ಕುಮಾರ್ ಮನವಿ ಮಾಡಿದರು.