ಶಿವಮೊಗ್ಗ:ಪೆಟ್ರೋಲ್, ಡಿಸೇಲ್ ದರ ಏರಿಕೆ ಖಂಡಿಸಿ, ಸೋಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದೆ. ಪೆಟ್ರೋಲ್, ಡಿಸೇಲ್, ಅಡುಗೆ ಅನಿಲಗಳ ದರ ಏರಿಕೆಯಿಂದ ಜನ ಸಾಮಾನ್ಯರು ಅನುಭವಿಸುವ ಕಷ್ಟವನ್ನು ಪ್ರತಿಭಟನಾಕಾರರು ಬಿಂಬಿಸಿದರು. ಸೈಕಲ್ ದಬ್ಬುವ ರೀತಿಯಲ್ಲಿ ಬೈಕ್ ಹಾಗೂ ಕಾರನ್ನು ರಸ್ತೆಯಲ್ಲಿ ಓಡಿಸಿಕೊಂಡು ಹೋಗದೇ, ದಬ್ಬುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಅಣಕಿಸಿದರು.
ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಎಸ್ಡಿಪಿಐ ವಿನೂತನ ಪ್ರತಿಭಟನೆ! - ಪೆಟ್ರೋಲ್, ಡಿಸೇಲ್ ದರ ಏರಿಕೆ
ಸೈಕಲ್ ದಬ್ಬುವ ರೀತಿಯಲ್ಲಿ ಬೈಕ್ ಹಾಗೂ ಕಾರನ್ನು ರಸ್ತೆಯಲ್ಲಿ ಓಡಿಸಿಕೊಂಡು ಹೋಗದೇ, ದಬ್ಬುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಅಣಕಿಸಿದ ಪ್ರತಿಭಟನಾಕಾರರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಎಸ್ಡಿಪಿಐ ಸಂಘಟನೆ ಸದಸ್ಯರು ನಗರದ ಮಹಾವೀರ ವೃತ್ತ, ಶಿವಮೂರ್ತಿ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಯನ್ನು ತಲುಪಿದರು. ಪ್ರಪಂಚದಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗುತ್ತಿದೆ. ಆದರೆ, ಭಾರತದಲ್ಲಿ ಮಾತ್ರ ತೈಲಗಳ ಬೆಲೆ ಏರಿಕೆ ಮಾಡಲಾಗುತ್ತಿದೆ. ಈ ಮೂಲಕ ಜನ ಸಾಮಾನ್ಯರ ಹೊಟ್ಟೆಯ ಮೇಲೆ ತಣ್ಣಿರು ಬಟ್ಟೆ ಹಾಕಲು ಸರ್ಕಾರ ಹೊರಟಿದೆ ಎಂದು ಟೀಕಿಸಿದರು.
ತೈಲ ಬೆಲೆ ಏರಿಕೆಯನ್ನು ಕೆಲವರು ಬೆಂಬಲಿಸಿ, ಇದು ದೇಶದ ಅಭಿವೃದ್ದಿಗೆ ಅವಶ್ಯಕ ಎಂದು ಹೇಳುವ ಮೂಲಕ ದೇಶದ ಆರ್ಥಿಕತೆಯನ್ನು ಪಾತಾಳಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಮ್ಮ ತೆರಿಗೆ ಕಡಿಮೆ ಮಾಡಬೇಕು. ಆಗ ಮಾತ್ರ ದರ ಇಳಿಕೆಯಾಗಲು ಸಾಧ್ಯವಾಗುತ್ತದೆ. ಇದರಿಂದ ತಕ್ಷಣ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತೈಲಗಳ ಮೇಲೆ ಹಾಕಿರುವ ತೆರಿಗೆಯನ್ನು ಕಡಿಮೆ ಮಾಡಬೇಕಿದೆ ಎಂದು ಆಗ್ರಹಿಸಿದರು.