ಶಿವಮೊಗ್ಗ: ಗೋ ಹತ್ಯೆ ನಿಷೇಧ ಕಾನೂನಿಗೆ ರಾಜ್ಯಪಾಲರು ಯಾವುದೇ ಕಾರಣಕ್ಕೂ ಸಹಿ ಹಾಕಬಾರದು ಎಂದು ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಗೋ ಹತ್ಯೆ ನಿಷೇಧಕ್ಕೆ ರಾಜ್ಯಪಾಲರು ಸಹಿ ಹಾಕದಂತೆ, ಎಸ್ಡಿಪಿಐನಿಂದ ಪ್ರತಿಭಟನೆ
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೋ ಹತ್ಯೆ ನಿಷೇಧ ಕಾನೂನು ಪ್ರಜೆಗಳಿಗೆ ನೀಡಿರುವ ಆಹಾರ ಹಕ್ಕಿನ ಉಲ್ಲಂಘನೆಯಾದಂತೆ. ಆದ್ದರಿಂದ ರಾಜ್ಯಪಾಲರು ಯಾವುದೇ ಕಾರಣಕ್ಕೂ ಈ ಕಾನೂನು ಜಾರಿಗೆ ಬರುವಂತೆ ಸಹಿ ಹಾಕಬಾರದು ಎಂದು ಶಿವಮೊಗ್ಗದಲ್ಲಿ ಎಸ್ಡಿಪಿಐಯಿಂದ ಪ್ರತಿಭಟನೆ ನಡೆಸಲಾಯಿತು.
ಎಸ್ಡಿಪಿಐನಿಂದ ಪ್ರತಿಭಟನೆ
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೋ ಹತ್ಯೆ ನಿಷೇಧ ಕಾನೂನು, ದಲಿತ, ಅಲ್ಪಸಂಖ್ಯಾತ ಹಾಗೂ ಸಂವಿಧಾನ ವಿರೋಧಿ ಕಾನೂನಾಗಿದೆ ಹಾಗೂ ಆರ್ಎಸ್ಎಸ್ನ ಕಾರ್ಯಸೂಚಿಯಾಗಿದೆ. ಈ ಕಾನೂನಿನಿಂದ ಪ್ರಜೆಗಳಿಗೆ ಸಂವಿಧಾನ ನೀಡಿರುವ ಆಹಾರ ಹಕ್ಕು ಉಲ್ಲಂಘನೆಯಾಗುತ್ತದೆ. ಈ ಕಾರಣದಿಂದಾಗಿ ರಾಜ್ಯಪಾಲರು ಯಾವುದೇ ಕಾರಣಕ್ಕೂ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಗೋ ಹತ್ಯೆ ನಿಷೇಧ ಕಾನೂನಿಗೆ ಸಹಿ ಹಾಕಬಾರದು ಹಾಗೂ ಈ ಕಾನೂನನ್ನು ತಿರಸ್ಕರಿಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.