ಶಿವಮೊಗ್ಗ :ಕೊರೊನಾ ಹೆಸರಿನಲ್ಲಿ ರಾಜ್ಯ ಸರ್ಕಾರವು ನಿರಂತರ ಭ್ರಷ್ಟಾಚಾರ ಮಾಡುತ್ತಿದೆ. ಭ್ರಷ್ಟಾಚಾರದಲ್ಲಿ ಪ್ರಕರಣದಲ್ಲಿ ಶಾಮೀಲಾಗಿರುವ ಸಚಿವರ ವಿರುದ್ಧ ರಾಜ್ಯಪಾಲರು ಕಾನೂನು ಕ್ರಮಕೈಗೊಳ್ಳಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆ ವೇಳೆ ಆಗ್ರಹಿಸಲಾಗಿದೆ.
ಕೊರೊನಾ ಹೆಸರಿನಲ್ಲಿ ಭ್ರಷ್ಟಾಚಾರ ಆರೋಪ : ಶಿವಮೊಗ್ಗದಲ್ಲಿ ಎಸ್ಡಿಪಿಐ ಪ್ರತಿಭಟನೆ - ಕೊರೊನಾ ಹೆಸರಿನಲ್ಲಿ ಭ್ರಷ್ಟಾಚಾರ ಆರೋಪ
ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ಮಾಡಲಾಗಿದ್ದು, ಈ ಭ್ರಷ್ಟಾಚಾರದಲ್ಲಿ ಅನೇಕ ಸಚಿವರು ಭಾಗಿಯಾಗಿದ್ದಾರೆ ಅಂತ ಸಚಿವರ ವಿರುದ್ಧ ರಾಜ್ಯಪಾಲರು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನೆ ವೇಳೆ ಒತ್ತಾಯಿಸಲಾಗಿದೆ.
![ಕೊರೊನಾ ಹೆಸರಿನಲ್ಲಿ ಭ್ರಷ್ಟಾಚಾರ ಆರೋಪ : ಶಿವಮೊಗ್ಗದಲ್ಲಿ ಎಸ್ಡಿಪಿಐ ಪ್ರತಿಭಟನೆ SDPI protests in Shimoga](https://etvbharatimages.akamaized.net/etvbharat/prod-images/768-512-8022586-thumbnail-3x2-smk.jpg)
ಶಿವಮೊಗ್ಗದಲ್ಲಿ ಎಸ್ಡಿಪಿಐ ಪ್ರತಿಭಟನೆ
ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ಮಾಡಲಾಗಿದೆ. ವೈದ್ಯಕೀಯ ಉಪಕರಣಗಳಾದ ಮಾಸ್ಕ್, ಸ್ಯಾನಿಟೈಜರ್, ವೆಂಟಿಲೇಟರ್.. ಹೀಗೆ ಪ್ರತಿಯೊಂದನ್ನು ದುಪ್ಪಟ್ಟು ಹಣ ನೀಡಿ ಖರೀದಿ ಮಾಡಿರುವುದು ತಿಳಿದು ಬಂದಿದೆ. ಈ ಭ್ರಷ್ಟಾಚಾರದಲ್ಲಿ ಅನೇಕ ಸಚಿವರು ಭಾಗಿಯಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಶಿವಮೊಗ್ಗದಲ್ಲಿ ಎಸ್ಡಿಪಿಐ ಪ್ರತಿಭಟನೆ
ಮುಖ್ಯಮಂತ್ರಿ ಪರಿಹಾರ ನಿಧಿಯ ಲೆಕ್ಕವನ್ನು ರಾಜ್ಯದ ಜನತೆಗೆ ನೀಡಬೇಕು. ಇಲ್ಲವಾದ್ರೆ ರಾಜಭವನ ಚಳವಳಿ ಮಾಡುವುದಾಗಿ ಎಚ್ಚರಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.