ಶಿವಮೊಗ್ಗ: ಹೈಕೋರ್ಟ್ ಆಫ್ ಕರ್ನಾಟಕ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಪೂರ್ವಭಾವಿ ಪರೀಕ್ಷೆ ನಗರದ ಬಿ.ಹೆಚ್.ರಸ್ತೆ, ಸೈನ್ಸ್ ಮೈದಾನದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಕೇಂದ್ರದಲ್ಲಿ ಸೆ. 27 ರಂದು ನಡೆಯಲಿದ್ದು, ಪರೀಕ್ಷಾ ದಿನದಂದು ಬೆಳಗ್ಗೆ 7.30 ರಿಂದ ಸಂಜೆ 5.30ರವರೆಗೆ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಸಿವಿಲ್ ಜಡ್ಜ್ ಹುದ್ದೆಗೆ ಪೂರ್ವಭಾವಿ ಪರೀಕ್ಷೆ: ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ - DC b shivkumar news
ಸೆ. 27 ರಂದು ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಪೂರ್ವಭಾವಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
![ಸಿವಿಲ್ ಜಡ್ಜ್ ಹುದ್ದೆಗೆ ಪೂರ್ವಭಾವಿ ಪರೀಕ್ಷೆ: ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ Dc Sivkumar](https://etvbharatimages.akamaized.net/etvbharat/prod-images/768-512-04:58:02:1600946882-kn-smg-04-exams-ka10011-24092020165447-2409f-1600946687-529.jpg)
ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಹೊರತುಪಡಿಸಿ ಇತರ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳೊಳಗೆ ಪ್ರವೇಶಿಸುವುದನ್ನು ನಿಷೇಧಿಸಿದೆ. ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಟೈಪಿಂಗ್, ಝೆರಾಕ್ಸ್ ಅಂಗಡಿಗಳು ತೆರೆಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯ ದ್ವಾರದಲ್ಲಿ ಕಡ್ಡಾಯವಾಗಿ ಆರಕ್ಷಕ ಸಿಬ್ಬಂದಿ ನಿಯೋಜಿಸಿ, ಅನಗತ್ಯವಾಗಿ ವ್ಯಕ್ತಿಗಳ ಚಲನ - ವಲನಗಳನ್ನು ನಿಯಂತ್ರಿಸಲು ಸಂಬಂಧಪಟ್ಟ ಠಾಣಾ ಮುಖ್ಯಸ್ಥರಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ.
ನಿರ್ಬಂಧಿತ ಪ್ರದೇಶದ ಸುತ್ತಮುತ್ತ ಐದು ಮತ್ತು ಐದಕ್ಕಿಂತ ಹೆಚ್ಚಿನ ಜನರು ಸೇರುವುದು, ಜೊತೆಗೆ ಮೊಬೈಲ್ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಸೆಕ್ಷನ್ 144 ಜಾರಿ ಮಾಡಿದ್ದಾರೆ.