ಶಿವಮೊಗ್ಗ: ಬಂಡವಾಳಶಾಹಿ ವ್ಯವಸ್ಥೆಯ ಕಪಿಮುಷ್ಠಿಗೆ ಸಿಲುಕಿರುವ ರೈತರು ಭೂಹೀನರಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ವರಿಷ್ಠ ಕೆ.ಟಿ. ಗಂಗಾಧರ್ ವಿಷಾದಿಸಿದರು.
ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಧಿಕ್ಕಾರ: ರೈತ ಸಂಘದ ವರಿಷ್ಠ ಕೆ.ಟಿ.ಗಂಗಾಧರ್
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ನಗರದಲ್ಲಿ ನರಗುಂದ ಬಂಡಾಯ ಹುತಾತ್ಮರ ನೆನಪು ಮತ್ತು ರೈತ ಹೋರಾಟದ ಮುಂದಿನ ಹೆಜ್ಜೆಗಳ ಕುರಿತು ವಿಚಾರ ಸಂಕೀರಣ ಆಯೋಜಿಸಲಾಗಿತ್ತು.
ರೈತ ಸಂಘದ ವರಿಷ್ಠ ಕೆ.ಟಿ ಗಂಗಾಧರ್
ವಿಚಾರ ಸಂಕೀರಣದಲ್ಲಿ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಸರ್ಕಾರಗಳು ರೈತ ವಿರೋಧಿ ಹಲವು ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಬಂಡವಾಳ ಶಾಹಿ ವ್ಯವಸ್ಥೆಯ ಕಪಿಮುಷ್ಟಿಗೆ ರೈತರು ಸಿಲುಕುವಂತಾಗುತ್ತಿದೆ ಎಂದರು.
ಕೃಷಿಭೂಮಿ ಮಾರಾಟದ ಸರಕಲ್ಲ. ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಧಿಕ್ಕಾರ. ಬಂಡವಾಳಶಾಹಿಗಳಿಗೆ, ಭೂಗಳ್ಳರಿಗೆ ಗ್ರಾಮದೊಳಗೆ ಪ್ರವೇಶವಿಲ್ಲ ಎಂಬ ಫಲಕವನ್ನು ಪ್ರತಿ ಗ್ರಾಮದ ಪ್ರವೇಶದ್ವಾರದಲ್ಲಿ ಹಾಕಿಕೊಳ್ಳಬೇಕು ಎಂದು ಹೇಳಿದರು.