ಶಿವಮೊಗ್ಗ: ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೋನೆಷನ್ ಹಾವಳಿ ತಪ್ಪಿಸಬೇಕು ಹಾಗೂ ಸರ್ಕಾರಿ ಶುಲ್ಕ ಮಾತ್ರ ಪಡೆಯುವಂತೆ ಸರ್ಕಾರ ಅದೇಶ ಹೊರಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ: ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ಹೆಚ್ಚಳ ವಿರೋಧಿಸಿ ಕ.ನಾ.ರ.ವೇ. ಸರ್ಕಾರಕ್ಕೆ ಮನವಿ - ಕೊರೊನಾ ಸೋಂಕು
ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೋನೆಷನ್ ಹಾವಳಿ ತಪ್ಪಿಸಬೇಕು ಹಾಗೂ ಸರ್ಕಾರಿ ಶುಲ್ಕ ಮಾತ್ರ ಪಡೆಯುವಂತೆ ಸರ್ಕಾರ ಅದೇಶ ಹೊರಡಿಸಬೇಕು ಎಂದು ಒತ್ತಾಯಿಸಿ ಶಿವಮೊಗ್ಗದ ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ: ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ಹೆಚ್ಚಳ ವಿರೋಧಿಸಿ ಕ.ನಾ.ರ.ವೇ. ಸರ್ಕಾರಕ್ಕೆ ಮನವಿ
ಕೊರೊನಾ ಮಹಾಮಾರಿಯಿಂದ ಪ್ರತಿಯೊಬ್ಬರೂ ಸಂಕಷ್ಟದಲ್ಲಿದ್ದು, ಜೀವನ ನಡೆಸುವುದೇ ಕಷ್ಟವಾಗಿದೆ. ಹೀಗಿರುವಾಗ ಖಾಸಗಿ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಶುಲ್ಕ ವಸೂಲಿಗೆ ಇಳಿದಿವೆ. ಹೀಗಾಗಿ ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳು ಯಾವುದೇ ಕಾರಣಕ್ಕೂ ಹೆಚ್ಚಿನ ಶುಲ್ಕ ವಸೂಲಿ ಮಾಡಬಾರದು. ಕೇವಲ ಸರ್ಕಾರಿ ಶುಲ್ಕ ಮಾತ್ರ ಪಡೆಯುವಂತೆ ಸರ್ಕಾರ ಆದೇಶ ಹೊರಡಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.