ಶಿವಮೊಗ್ಗ :ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯಿಂದ ನಗರ ಹಿಂಸಾರೂಪಕ್ಕೆ ತಿರುಗಿ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಸದ್ಯ ಕಳೆದೆರಡು ದಿನಗಳಿಂದ ಶಿವಮೊಗ್ಗ ಸಹಜ ಸ್ಥಿತಿಗೆ ಮರಳುತ್ತಿದೆ.
ಸಹಜ ಸ್ಥಿತಿಯತ್ತ ಶಿವಮೊಗ್ಗ ನಗರ ಫೆಬ್ರವರಿ 20ರ ರಾತ್ರಿ ಬಜರಂಗದಳದ ಕಾರ್ಯಕರ್ತ ಹರ್ಷನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಪ್ರಕರಣದಿಂದ ನಗರದಲ್ಲಿ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚಿದಂತಹ ಘಟನೆ ನಡೆದಿದ್ದವು. ಸದ್ಯ ನಗರದಲ್ಲಿ ಕರ್ಫ್ಯೂ ಜಾರಿಯಲಿದ್ದು, ಜನಜೀವನ ಸಹಜ ಸ್ಥಿತಿಯತ್ತ ಸಾಗುತ್ತಿದೆ.
ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿ ಅನಗತ್ಯ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಜೊತೆಗೆ ಅಗತ್ಯ ವಸ್ತುಗಳ ಖರೀದಿ ಹೊರತು ಪಡಿಸಿ ಅಂಗಡಿ-ಮುಂಗ್ಗಟ್ಟುಗಳು ಸಂಪೂರ್ಣ ಬಂದ್ ಆಗಿವೆ.
ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ನಗರದಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇದರ ನಡುವೆ ಸೋಮವಾರದವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಹಿಜಾಬ್ ತೀರ್ಪು ಕಾಯ್ದಿರಿಸಿದ ಹೈಕೋರ್ಟ್: ಕೊನೆಯ ದಿನ ನಡೆದ ವಾದ-ಪ್ರತಿವಾದಗಳೇನು!?