ಶಿವಮೊಗ್ಗ: ಜಿಲ್ಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಕೊರೊನಾ ವೈರಸ್ ಹರಡದಂತೆ ತಡೆಯುವ ಸಲುವಾಗಿ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆಯನ್ನು ಮೇ-17 ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ: ಹಸಿರು ವಲಯ ಕಾಪಾಡಿಕೊಳ್ಳಲು ಲಾಕ್ಡೌನ್ ವಿಸ್ತರಿಸಿದ ಡಿಸಿ - ಕೋವಿಡ್ 19
ಕೊರೊನಾ ವೈರಸ್ ಹರಡದಂತೆ ತಡೆಯುವ ಸಲುವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಜಾರಿಗೊಳಿಸಲಾಗಿದ್ದ ಲಾಕ್ಡೌನ್ ಅನ್ನು ಮುಂದುವರೆಸಲಾಗಿದ್ದು, ನಿಯಮ ಮೀರಿದವರಿಗೆ ಕಠಿಣ ಶಿಕ್ಷೆ ನೀಡುವುದಾಗಿಯೂ ಜಿಲ್ಲಾಡಳಿತ ಎಚ್ಚರಿಸಿದೆ.
ಶಿವಮೊಗ್ಗ: ಹಸಿರು ವಲಯ ಕಾಪಾಡಿಕೊಳ್ಳಲು ಲಾಕ್ಡೌನ್ ವಿಸ್ತರಿಸಿದ ಡಿಸಿ
ಮೇ. 17 ರವರೆಗೆ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 188ರ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.