ಶಿವಮೊಗ್ಗ :ಶಿಕಾರಿಪುರದ 85 ವರ್ಷದ ವೃದ್ಧರೊಬ್ಬರು ಮೆಗ್ಗಾನ್ ಕೋವಿಡ್ ಆಸ್ಪತ್ರೆಯಿಂದ ನಾಪತ್ತೆಯಾದ ಬಗ್ಗೆ ಪೊಲೀಸ್ ತನಿಖೆ ಪ್ರಾರಂಭವಾಗಿದೆ. ಪೊಲೀಸರ ವರದಿ ಬಂದ ನಂತರ ಪ್ರತಿಕ್ರಿಯಿಸುವುದಾಗಿ ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ತಿಳಿಸಿದ್ದಾರೆ.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾತನಾಡಿದ ಅವರು, ಮೆಗ್ಗಾನ್ ಆಸ್ಪತ್ರೆಯಿಂದ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೊಲೀಸರು ತನಿಖೆ ನಡೆಸಿ ವರದಿ ಬಂದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಸದ್ಯ ನಾಪತ್ತೆ ಪ್ರಕರಣ ತನಿಖೆಯಲ್ಲಿರುವುದರಿಂದ ನಾನು ಈಗ ಪ್ರತಿಕ್ರಿಯೆ ನೀಡುವುದು ಸರಿಯಾಗುವುದಿಲ್ಲ ಎಂದರು. ಜಿಲ್ಲೆಯ ಕೋವಿಡ್ ಸಂಬಂಧಪಟ್ಟಂತೆ ಯಾವುದೇ ರೀತಿಯ ಮಾಹಿತಿಯನ್ನು ಜಿಲ್ಲಾಧಿಕಾರಿಯಾಗಿ ನಾನು ನೀಡಿದ ಮೇಲೆಯೇ ಅಂತಿಮ ಎಂದರು.