ಕರ್ನಾಟಕ

karnataka

ETV Bharat / state

ಕೋವಿಡ್ ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್ ಕೇಸ್​​​​​: ಶಿವಮೊಗ್ಗ ಡಿಸಿ ಎಚ್ಚರಿಕೆ - Shimogga Dc

ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದರೆ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್
ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್

By

Published : Jun 25, 2020, 9:55 AM IST

ಶಿವಮೊಗ್ಗ: ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆಯಿಂದ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸಿರುವ ನಿರ್ದೇಶನಗಳನ್ನು ಪಾಲಿಸಬೇಕು. ಇಲ್ಲದಿದ್ದರೆ, ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಗೆ ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳಿಂದ ಆಗಮಿಸುವವರನ್ನು ಸರ್ಕಾರದ ನಿರ್ದೇಶನದಂತೆ 14 ದಿನಗಳ ಹೋಂ ಕ್ವಾರಂಟೈನ್​ನಲ್ಲಿ ಇರಿಸಿ ಅವರ ಮನೆಗಳನ್ನು ಸೀಲ್‍ಡೌನ್ ಮಾಡಲಾಗುತ್ತಿದೆ. ಹೋಂ ಕ್ವಾರಂಟೈನ್​ನಲ್ಲಿ ಇರಿಸಿದ ವ್ಯಕ್ತಿಗಳು ನಿಯಮಗಳನ್ನು ಉಲ್ಲಂಘಿಸಿ ಮನೆಯಿಂದ ಹೊರಬಂದರೆ ಸೋಂಕು ಸಮುದಾಯಕ್ಕೆ ಹರಡುವ ಸಾಧ್ಯತೆಗಳು ಹೆಚ್ಚಿರುತ್ತದೆ.

ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಮೊದಲ ಬಾರಿ ಎಚ್ಚರಿಕೆ ನೀಡಲಾಗುವುದು. ಎರಡನೇ ಬಾರಿ ಉಲ್ಲಂಘನೆಗೆ ಎಫ್‍ಐಆರ್ ದಾಖಲಿಸಲಾಗುವುದು ಮತ್ತು ಗೃಹ ದಿಗ್ಬಂಧನದಿಂದ ಸಾಂಸ್ಥಿಕ ದಿಗ್ಬಂಧನಕ್ಕೆ ವರ್ಗಾಯಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.

ABOUT THE AUTHOR

...view details