ಶಿವಮೊಗ್ಗ: ನ್ಯಾ. ಎ.ಜೆ ಸದಾಶಿವ ಆಯೋಗದ ವರದಿಯನ್ನು ಬಹಿರಂಗ ಚರ್ಚೆಗೆ ನೀಡದೆ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬಾರದು ಎಂದು ಆಗ್ರಹಿಸಿ ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ: ಸದಾಶಿವ ಆಯೋಗದ ಬಹಿರಂಗ ಚರ್ಚೆಗೆ ಆಗ್ರಹ
ನ್ಯಾ. ಸದಾಶಿವ ಆಯೋಗದ ವರದಿ ಬಹಿರಂಗ ಚರ್ಚೆ ಇಲ್ಲದೇ ಏಕಪಕ್ಷೀಯವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬಾರದು ಎಂದು ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ವರದಿಯಿಂದ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಸಮುದಾಯಗಳಲ್ಲಿ ಪರಸ್ಪರ ದ್ವೇಷ ಹುಟ್ಟುತ್ತದೆ. ಹಾಗಾಗಿ ನ್ಯಾ. ಸದಾಶಿವ ಆಯೋಗದ ವರದಿ ಬಹಿರಂಗ ಚರ್ಚೆ ಇಲ್ಲದೇ ಏಕಪಕ್ಷೀಯವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬಾರದು ಎಂದು ಒತ್ತಾಯಿಸಿದರು.
ಪರಿಶಿಷ್ಟ ಜಾತಿಯ 101 ಸಮುದಾಯಗಳಿಗೆ ಮತ್ತು ಆಸಕ್ತರಿಗೆ ಇದರ ದೃಢೀಕೃತ ಪ್ರತಿಯನ್ನು ನೀಡಬೇಕು. ತಕರಾರು, ಆಕ್ಷೇಪಣೆ ಸೂಚಿಸಲು ಕಾಲಾವಕಾಶ ನೀಡಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳಕ್ಕಾಗಿ ಶಿಫಾರಸು ಮಾಡಿರುವ ನ್ಯಾ. ನಾಗಮೋಹನದಾಸ್ ವರದಿಯನ್ನು ಪ್ರಕಟಿಸಬೇಕು ಮತ್ತು ರಾಜ್ಯದ ಎಲ್ಲ ಜಾತಿ ಜನಾಂಗ ಬುಡಕಟ್ಟುಗಳ ವಾಸ್ತವ ಸ್ಥಿತಿಗತಿಗಳನ್ನು ಅರಿಯುವಂತಾಗಲು ಹಿಂದಿನ ಸರ್ಕಾರ ಕೈಗೊಂಡಿದ್ದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.