ಶಿವಮೊಗ್ಗ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಜನ್ಮ ದಿನಾಚರಣೆಯನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿಶೇಷವಾಗಿ ಆಚರಿಸಲಾಗಿದೆ.
ರಾಹುಲ್ ಗಾಂಧಿ ಜನ್ಮದಿನಾಚರಣೆ...ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಡವರಿಗೆ ಕಿಟ್ ವಿತರಣೆ... - ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್
ಮಹಾಮಾರಿ ಕೊರೊನಾದಿಂದಾಗಿ ದೇಶಾದ್ಯಂತ ಜನರು ಹಾಗೂ ಕಾರ್ಮಿಕರು ಸಂಕಷ್ಟಕ್ಕೆ ಈಡಾಗೀದ್ದಾರೆ. ಹೀಗಾಗಿ ಯಾರೂ ಕೂಡ ಜನ್ಮದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸದಂತೆ ರಾಹುಲ್ ಗಾಂಧಿಯವರು ಕರೆ ನೀಡಿದ್ದ ಹಿನ್ನೆಲೆ ಜಿಲ್ಲಾ ಕಾಂಗ್ರೆಸ್ ವಿಭಿನ್ನವಾಗಿ ಹಾಗೂ ಎಲ್ಲರಿಗೂ ಮಾದರಿಯಾಗುವಂತೆ ಜನ್ಮದಿನಾಚರಣೆ ಆಚರಿಸಿದೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಕಷ್ಟದಲ್ಲಿರುವ ಕಡು ಬಡವರಿಗೆ ಆಹಾರ ಪದಾರ್ಥಗಳ ಕಿಟ್ ಗಳನ್ನು ವಿತರಿಸುವ ಮೂಲಕ ಎಐಸಿಸಿ ಮುಖಂಡ ರಾಹುಲ್ ಗಾಂಧಿಯವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಹಾಗೂ ಇದೇ ಸಮಯದಲ್ಲಿ ಚೀನಾ ಗಡಿಯಲ್ಲಿ ಹುತಾತ್ಮರಾದ ಯೋಧರಿಗೆ ಪುಷ್ಪನಮನ ಸಲ್ಲಿಸಲಾಯಿತು.
ಮಹಾಮಾರಿ ಕೊರೊನಾದಿಂದಾಗಿ ದೇಶಾದ್ಯಂತ ಜನರು ಹಾಗೂ ಕಾರ್ಮಿಕರು ಸಂಕಷ್ಟಕ್ಕೆ ಈಡಾಗಿದ್ದಾರೆ. ಹೀಗಾಗಿ ಯಾರೂ ಕೂಡ ಜನ್ಮದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸದಂತೆ ರಾಹುಲ್ ಗಾಂಧಿಯವರು ಕರೆ ನೀಡಿದ್ದ ಹಿನ್ನೆಲೆ ಜಿಲ್ಲಾ ಕಾಂಗ್ರೆಸ್ ವಿಭಿನ್ನವಾಗಿ ಹಾಗೂ ಎಲ್ಲರಿಗೂ ಮಾದರಿಯಾಗುವಂತೆ ಜನ್ಮದಿನಾಚರಣೆ ಆಚರಿಸಿದ್ದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು.