ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ 2020ನೇ ಸಾಲಿನ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಯ ಬಗ್ಗೆ ಕೆಲ ಕಿಡಿಗೇಡಿಗಳು ನಕಲಿ ರಾಜ್ಯ ಪತ್ರವನ್ನು ಸೃಷ್ಟಿಸಿ ಹರಿಬಿಟ್ಟಿರುತ್ತಾರೆ. ಇದು ನಕಲಿಯಾಗಿದ್ದು, ರಾಜ್ಯ ಚುನಾವಣಾ ಆಯೋಗವು ಈ ರೀತಿಯ ಯಾವುದೇ ಆದೇಶವನ್ನು ಹೊರಡಿಸಿರುವುದಿಲ್ಲವೆಂದು ಈಗಾಗಲೇ ಸ್ಪಷ್ಟಪಡಿಸಿರುತ್ತದೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.
2020ನೇ ಸಾಲಿನ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಯನ್ನು ಏಪ್ರಿಲ್ 5 ಮತ್ತು ಏಪ್ರಿಲ್ 9 ರಂದು ನಡೆಸಲಾಗುತ್ತಿದೆ ಎಂದು ಹಾಗೂ ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರೌಢ ಶಿಕ್ಷಣದಲ್ಲಿ ಉತ್ತೀರ್ಣರಾಗಿರಬೇಕು, ಆಧಾರ್ ಕಾರ್ಡ್ & ಪಾನ್ ಕಾರ್ಡ್ ಗಳನ್ನು ಕರ್ನಾಟಕದಲ್ಲಿ ಹೊಂದಿರಬೇಕು ಎಂದು ರಾಜ್ಯ ಚುನಾವಣಾ ಆಯೋಗವು ಆದೇಶಿಸಿರುತ್ತದೆ ಎಂಬಂತಹ ನಕಲಿ ಸಂದೇಶವೊಂದು ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್ ಫೇಸ್ಬುಕ್ನಲ್ಲಿ ಹರಿದಾಡಿತ್ತು.