ಕರ್ನಾಟಕ

karnataka

ETV Bharat / state

ಶಿವಮೊಗ್ಗ: ಕೊಳಚೆ ಪ್ರದೇಶದ 18,700 ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ

ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರದಿಂದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಮಾಲೀಕತ್ವದಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳಲ್ಲಿ ವಾಸವಿರುವ ನಿವಾಸಿಗಳಿಗೆ ಸ್ವತ್ತಿನ ಹಕ್ಕುಪತ್ರ ನೀಡಲು ನಿರ್ಧರಿಸಲಾಗಿದೆ. ಅದರಂತೆ ಶಿವಮೊಗ್ಗದ ಸರ್ಕಾರಿ ಮಾಲೀಕತ್ವದ 25 ಹಾಗೂ ಸ್ಥಳೀಯ ಸಂಸ್ಥೆ ಮಾಲೀಕತ್ವದ 10 ಕೊಳಚೆ ಪ್ರದೇಶಗಳು‌‌ ಸೇರಿದಂತೆ ಒಟ್ಟು‌ 35 ಕೊಳಚೆ ಪ್ರದೇಶಗಳಿಗೆ ಹಕ್ಕುಪತ್ರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

shimoga-documents-will-be-issued-for-18700-residents
ಶಿವಮೊಗ್ಗ: ಕೊಳಚೆ ಪ್ರದೇಶದ 18.700 ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ

By

Published : Jan 2, 2021, 3:34 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಘೋಷಿತ ಕೊಳಚೆ ಪ್ರದೇಶದ 18,700 ನಿವಾಸಿಗಳಿಗೆ ಶೀಘ್ರದಲ್ಲಿಯೇ ಹಕ್ಕುಪತ್ರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಸಚಿವ ಕೆ.ಎಸ್​.ಈಶ್ವರಪ್ಪ

ಜಿಲ್ಲೆಯಲ್ಲಿ ಸರ್ಕಾರದ ಆದೇಶ ಸಂಖ್ಯೆ ಇ/88: ಎಸ್​ಬಿ ಎಂ/2020 ಪ್ರಕಾರ 26-11-2020ರಲ್ಲಿ ಸರ್ಕಾರಿ, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಮಾಲೀಕತ್ವದಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳಲ್ಲಿ ವಾಸವಿರುವ ಕೊಳಚೆ ನಿವಾಸಿಗಳಿದೆ ಸ್ವತ್ತಿನ ಹಕ್ಕುಪತ್ರ ನೀಡಲು ನಿರ್ಧರಿಸಲಾಗಿದೆ. ಅದರಂತೆ ಶಿವಮೊಗ್ಗದ ಸರ್ಕಾರಿ ಮಾಲೀಕತ್ವದ 25 ಹಾಗೂ ಸ್ಥಳೀಯ ಸಂಸ್ಥೆ ಮಾಲೀಕತ್ವದ 10 ಕೊಳಚೆ ಪ್ರದೇಶಗಳು‌‌ ಸೇರಿದಂತೆ ಒಟ್ಟು‌ 35 ಕೊಳಚೆ ಪ್ರದೇಶಗಳಿಗೆ ಹಕ್ಕುಪತ್ರ ನೀಡಲಾಗುವುದು ಎಂದರು.

ಮೊದಲ ಹಂತದಲ್ಲಿ ಕೊಳಚೆ ಪ್ರದೇಶಗಳಲ್ಲಿರುವ ಮನೆಗಳಿಗೆ ನಂಬರ್ ಹಾಕುವ ಕಾರ್ಯವನ್ನು ನಾಳೆಯಿಂದ ಪ್ರಾರಂಭ ಮಾಡಲಾಗುವುದು. ಎರಡನೇ ಹಂತದಲ್ಲಿ ಮನೆಗಳ ಸಮೀಕ್ಷಾ ಕಾರ್ಯವನ್ನು 6ನೇ ತಾರೀಖಿನಿಂದ ಪ್ರಾರಂಭ ಮಾಡಲಾಗುವುದು.‌ ಈ ಅಭಿಮಾನಕ್ಕೆ ಸರ್ವೆ ಕಾರ್ಯಕ್ಕೆ ಬರುವ ಸಿಬ್ಬಂದಿಗೆ ಕೊಳಚೆ ಪ್ರದೇಶದ ನಿವಾಸಿಗಳು ಅಗತ್ಯ ನಿಖರ ಮಾಹಿತಿ ನೀಡಬೇಕು ಎಂದು ವಿನಂತಿಸಿಕೊಂಡರು.

ಹಕ್ಕುಪತ್ರ ನೀಡಿದ ನಂತರ ಇಲ್ಲಿನ ನಿವಾಸಿಗಳು ಬ್ಯಾಂಕ್​​ನಿಂದ ಸಾಲ ಪಡೆದು ತಮ್ಮದೇ ಸ್ವಂತ ಮನೆ ಕಟ್ಟಿಕೊಳ್ಳಬಹುದಾಗಿದೆ. ನಾನು ಮೊದಲು ಶಾಸಕನಾದ ದಿನದಿಂದಲೂ ಸಹ ಕೊಳಚೆ ಪ್ರದೇಶದ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕೆಂಬ ಆಸೆ ಇತ್ತು. ಈಗ ಪಕ್ಷದ ಅಪೇಕ್ಷೆಯು ಸಹ ಅದೇ ಆಗಿದೆ ಎಂದರು.

ಈ ವೇಳೆ ಡಿಸಿ ಕೆ. ಬಿ. ಶಿವಕುಮಾರ್, ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಸ್ಲಂ ಬೋರ್ಡ್ ಅಧಿಕಾರಿಗಳು ಹಾಜರಿದ್ದರು.

ABOUT THE AUTHOR

...view details