ಶಿವಮೊಗ್ಗ:ಇಂದಿನಿಂದ ಲಾಕ್ಡೌನ್ ಹಿನ್ನೆಲೆ ನಗರ ಪೊಲೀಸರು ಸರ್ವ ರೀತಿಯಲ್ಲಿ ಸನ್ನದ್ಧರಾಗಿದ್ದು, ನಿಯಮ ಉಲ್ಲಂಘಿಸಿ ರಸ್ತೆಗಿಳಿಯುವವರ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.
ಸರ್ಕಾರದ ಮಾರ್ಗಸೂಚಿ ಪ್ರಕಾರ ಲಾಕ್ಡೌನ್ ಅವಧಿಯಲ್ಲಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಆದರೆ, ಮಾರುಕಟ್ಟೆಗಳಿಗೆ ವಾಹನದಲ್ಲಿ ಹೋಗುವಂತಿಲ್ಲ. ಆದರೂ ಕೆಲವರು ನಿಯಮ ಮೀರಿ ಓಡಾಡುತ್ತಿದ್ದಾರೆ. ಶಿವಮೊಗ್ಗದ ನಗರದ ಎ.ಎ ವೃತ್ತದಲ್ಲಿ ಸಿಇಎನ್ ಪೊಲೀಸ್ ಠಾಣೆಯ ಪಿಐ ಗುರುರಾಜ್ ಕರ್ಕಿ ನೇತೃತ್ವದಲ್ಲಿ ಪೊಲೀಸರು ತಪಾಸಣೆಯಲ್ಲಿ ತೊಡಗಿದ್ದು, ಯಾವುದೇ ಪಾಸ್ ಅಥವಾ ಸರಿಯಾದ ಕಾರಣವಿಲ್ಲದೆ ಅನಗತ್ಯವಾಗಿ ಓಡಾಡುತ್ತಿದ್ದವರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.